ಉಡುಪಿ| ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಪದಾಧಿಕಾರಿಗಳ ಪದಗ್ರಹಣ

ಉಡುಪಿ, ಜು.1: ಕೇವಲ ಚುನಾವಣೆ ಗೆಲ್ಲುವುದೇ ಬಿಜೆಪಿ ಗುರಿ ಅಲ್ಲ. ವಿಚಾರದ ಅಡಿಯಲ್ಲಿ ಚುನಾವಣೆ ಎದುರಿಸಿ ಉತ್ತಮ ಗೆಲುವು ಸಾಧಿಸುವುದು, ರಾಷ್ಟ್ರೀಯ ವಿಚಾರಧಾರೆಯ ಮೂಲಕ ದೇಶ ಮೊದಲು ಎಂಬ ಚಿಂತನೆ ಯೊಂದಿಗೆ, ಭಯ ಮುಕ್ತ ರಾಷ್ಟ್ರ ನಿರ್ಮಾಣ, ವಿಕಸಿತ ಭಾರತ ಪರಿಕಲ್ಪನೆಯೊಂದಿಗೆ ವಿಶ್ವ ಗುರು ಭಾರತ ಬಿಜೆಪಿ ಗುರಿಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದ್ದಾರೆ.
ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿಸೋಜ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣವನ್ನು ನೆರವೇರಿಸಿ, ನಿಯುಕ್ತಿ ಪತ್ರವನ್ನು ವಿತರಿಸಿ ಅವರು ಮಾತನಾಡುತಿದ್ದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಪಕ್ಷದ ಸಭೆಗಳು, ಪದಾಧಿಕಾರಿಗಳ ಜವಾಬ್ದಾರಿ ಮತ್ತು ಸಂಘಟನಾತ್ಮಕ ವಿಚಾರಗಳ ಕುರಿತು ವಿಸ್ತ್ರತ ಮಾಹಿತಿ ನೀಡಿದರು. ಅಲ್ಪಸಂಖ್ಯಾತ ಮೋರ್ಚಾದ ಮಾಜಿ ರಾಜ್ಯ ಕಾರ್ಯದರ್ಶಿ ಸಲೀಂ ಅಂಬಾಗಿಲು ಮಾತನಾಡಿದರು.
ಮೋರ್ಚಾದ ಪದಾಧಿಕಾರಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶೇಕ್ ಆಸಿಫ್ ಕಟಪಾಡಿ, ಮಹಮ್ಮದ್ ಅಪ್ಸರ್ ಉಚ್ಚಿಲ ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಗೀತೆ ಹಾಡಿದರು. ಮೋರ್ಚಾದ ಉಪಾಧ್ಯಕ್ಷ ಚಿರಂಜೀವಿ ಜೈನ್ ಸ್ವಾಗತಿಸಿದರು. ಕೋಶಾಧಿಕಾರಿ ಗ್ಲೆನ್ ಮೋನಿಸ್ ಕಾರ್ಯಕ್ರಮ ನಿರೂಪಿಸಿ, ಉಪಾಧ್ಯಕ್ಷ ಮೈಕಲ್ ಡಿಸೋಜ ವಂದಿಸಿದರು.






