ಗ್ರಾಮ ಸಹಾಯಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಜು.4: ಬ್ರಹ್ಮಾವರ ತಾಲೂಕು ಕೊಕ್ಕರ್ಣೆ ಗ್ರಾಮ ವೃತ್ತದ ಗ್ರಾಮಸಹಾಯಕರ ಹುದ್ದೆಗೆ ಅರ್ಹ ಅಭ್ಯರ್ಥಿ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 6 ಕೊನೆಯ ದಿನ.
ಸರಕಾರ ನೀಡಿರುವ ಸೂಚನೆಗಳನ್ನು ಆಧರಿಸಿ, ಅಭ್ಯರ್ಥಿಗಳನ್ನು ನೇಮಕ ಮಾಡಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಬ್ರಹ್ಮಾವರ ತಾಲೂಕು ತಹಶೀಲ್ದಾರರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Next Story




