ಒತ್ತಿನೆಣೆ: ಗುಡ್ಡ ಕುಸಿತದ ಪ್ರದೇಶಕ್ಕೆ ಉಡುಪಿ ಡಿಸಿ ಭೇಟಿ

ಬೈಂದೂರು, ಜು.6: ಮಳೆಗಾಲದಲ್ಲಿ ಸಾಮಾನ್ಯವಾಗಿ ಗುಡ್ಡ ಕುಸಿದು ವಾಹನಗಳ ಸಂಚಾರಕ್ಕೆ ಸಮಸ್ಯೆಯುಂಟಾ ಗುವ ತಾಲೂಕಿನ ಒತ್ತಿನೆಣೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ಇರುವ ಗುಡ್ಡ ಕುಸಿತದ ಪ್ರದೇಶಕ್ಕೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಇಂದು ಭೇಟಿ ನೀಡಿ ಪರಿಶೀಲಿಸಿದರು.
ರಾಷ್ಟ್ರೀಯ ಹೆದ್ದಾರಿ 66ರ ವಿಸ್ತರಣೆಯ ವೇಳೆ ಗುತ್ತಿಗೆದಾರ ಕಂಪೆನಿ ಒತ್ತಿನೆಣೆ ಗುಡ್ಡ ಕೊರೆದು ರಸ್ತೆ ನಿರ್ಮಿಸಿತ್ತು. ಭಾರೀ ಮಳೆಯಾಗುವ ಜೇಡಿ ಮಣ್ಣಿನಿಂದ ಕೂಡಿದ ಗುಡ್ಡ ಆಗಾಗ ರಸ್ತೆಯ ಮೇಲೆಯೇ ಕುಸಿದು ವಾಹನಗಳ ಸಂಚಾರಕ್ಕೆ ಅಡ್ಡಿಯಾಗುತ್ತಿದೆ.
ಜಿಲ್ಲಾಧಿಕಾರಿಗಳು ಇಂದು ಒತ್ತಿನೆಣೆ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಬಗ್ಗೆ ರಾಷ್ಟೀಯ ಹೆದ್ದಾರಿ ಇಲಾಖೆಯ ಅಭಿಯಂತರಗಳಿಂದ ಮಾಹಿತಿಗಳನ್ನು ಪಡೆದು ಕೊಂಡರು. ಇಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕಾಮಗಾರಿ ಕುರಿತು ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
Next Story






