Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಆರ್‌ಎಸ್‌ಎಸ್ ಕಾರಣ: ಎಂ.ಜಿ.ಹೆಗಡೆ ಆರೋಪ

ವಾರ್ತಾಭಾರತಿವಾರ್ತಾಭಾರತಿ6 July 2026 9:18 PM IST
share
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಆರ್‌ಎಸ್‌ಎಸ್ ಕಾರಣ: ಎಂ.ಜಿ.ಹೆಗಡೆ ಆರೋಪ
ಯುವ ಕಾಂಗ್ರೆಸ್‌ನಿಂದ ನೀಟ್ ಅಕ್ರಮ ವಿರುದ್ಧ ಕ್ಯಾಂಡಲ್‌ಲೈಟ್ ಮಾರ್ಚ್

ಉಡುಪಿ, ಜು.6: ನೀಟ್ ಪರೀಕ್ಷೆಯಲ್ಲಿನ ಅಕ್ರಮದ ವಿರುದ್ಧ ಹಾಗೂ ಇದರಿಂದ ಅಸುನೀಗಿದ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸೋಮವಾರ ಕ್ಯಾಂಡಲ್ ಲೈಟ್ ಮಾರ್ಚ್ ಹಮ್ಮಿಕೊಳ್ಳಲಾಗಿತ್ತು.

ಕ್ಯಾಂಡಲ್ ಲೈಟ್ ಮಾರ್ಚ್‌ಗೆ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್ ಬಳಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಚಾಲನೆ ನೀಡಿದರು. ಅಲ್ಲಿಂದ ಹೊರಟ ಜಾಥವು ಕಲ್ಸಂಕ, ಸಿಟಿ ಬಸ್ ನಿಲ್ದಾಣ, ಸರ್ವಿಸ್ ಬಸ್ ನಿಲ್ದಾಣದ ಮಾರ್ಗವಾಗಿ ನಗರದ ಹಳೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಾಪ್ತಿಗೊಂಡಿತು.

ಬಳಿಕ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಎಂ.ಜಿ.ಹೆಗಡೆ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಆರ್‌ಎಸ್‌ಎಸ್ ಕಾರಣ. ಇದು ನಮಗೆ ಅರ್ಥ ಆಗಬೇಕು. ಆರ್‌ಎಸ್‌ಎಸ್ ಮೋದಿ ಸರಕಾರ ಬಂದಾಗ ಶಿಕ್ಷಣ ಮತ್ತು ಸಂಸ್ಕೃತಿ ಇಲಾಖೆಯ ಸಚಿವಾಲಯವನ್ನು ಕೇಳಿತು. ಈ ಎರಡು ಇಲಾಖೆ ಗಳನ್ನು ಇಟ್ಟುಕೊಂಡು ಆರ್‌ಎಸ್‌ಎಸ್ ತನ್ನ ವಿಚಾರಧಾರೆಯನ್ನು ಆಡಳಿತ ವ್ಯವಸ್ಥೆಯಲ್ಲಿ ಅನುಷ್ಠಾನಗೊಳಿಸುತ್ತಿದೆ. ಎಬಿವಿಪಿ, ಆರೆಸ್ಸೆಸ್‌ ನವರು ನೀಟ್ ಅಧಿಕಾರ ಮಂಡಳಿಯಲ್ಲಿ ಬಂದು ಕುಳಿತುಕೊಂಡಿದ್ದಾರೆ ಎಂದು ದೂರಿದರು.

ಆರ್‌ಎಸ್‌ಎಸ್ ಅಧಿಕಾರದ ರಾಜಕಾರಣಕ್ಕೆ ಬಂದವರಲ್ಲ. ಅವರು ಈ ರಾಜಕಾರಣವನ್ನು ದುರಪಯೋಗ ಮಾಡಿ ಕೊಂಡು ಭಾರತದಲ್ಲಿ ಹೊಸ ಸೈದ್ಧಾಂತಿಕತೆಯನ್ನು ಸ್ಥಾಪನೆ ಮಾಡಲು ಬಂದವರು. ಆರೆಸ್ಸೆಸ್‌ಗೆ ವೈಜ್ಞಾನಿಕ, ವೈಚಾರಿಕ ಹಾಗೂ ಅಭಿವೃದ್ಧಿ ಶೀಲ ಮನಸ್ಸುಗಳನ್ನು ತಯಾರು ಮಾಡುವ ಶಿಕ್ಷಣ ಬೇಕಿಲ್ಲ. ಅವರಿಗೆ ಸಾರ್ವಕರ್ ಪ್ರತಿಪಾದಿಸುವ ಹಿಂದುತ್ವದ ಶೈಕ್ಷಣಿಕ ವ್ಯವಸ್ಥೆ ಬೇಕಾಗಿದೆ. ಹಾಗಾಗಿ ಉಡುಪಿ ಕ್ಷೇತ್ರದ ಶಾಸಕ ಯಶ್‌ಪಾಲ್ ಸುವರ್ಣರಿಗೆ ತನ್ನ ಕ್ಷೇತ್ರಕ್ಕೆ ಐಐಟಿ ಬೇಕು ಎಂದು ಅನಿಸುವುದಿಲ್ಲ. ಅವರಿಗೆ ಕೇಸರಿ ಶಾಲು ಹಾಕಿಕೊಂಡು ಯುವಕರು ಹೊಡೆದಾಟ ಮಾಡಿದರೆ, ಹಿಜಾಬ್ ಗಲಾಟೆ ಮಾಡಿದರೆ ಮಾತ್ರ ಮತ ಸಿಗುವುದು. ಅವರಿಗೆ ವೈಜ್ಞಾನಿಕ ಚಿಂತನೆ ಬೇಡ ಎಂದು ಅವರು ಕಟುವಾಗಿ ಟೀಕಿಸಿದರು.

ಬಿಜೆಪಿಯ ಹೈಕಮಾಂಡ್ ಮುಖ ಇಲ್ಲದ ಆರ್‌ಎಸ್‌ಎಸ್. ಯಾಕೆಂದರೆ ಅದು ಇನ್ನೂ ನೋಂದಾಣಿ ಮಾಡಿಕೊಂಡಿಲ್ಲ ಮತ್ತು ಸಾರ್ವಜನಿಕವಾಗಿ ಎಲ್ಲೂ ಮುಂದೆ ಬರುವುದಿಲ್ಲ. ಭಾರತದ ಎಲ್ಲ ವ್ಯವಸ್ಥೆಯಲ್ಲಿ ಬಂದು ಪ್ರಶ್ನಿಸುವ ಆರೆಸ್ಸೆಸ್‌ನ್ನು ಕೂಡ ಪ್ರಶ್ನಿಸುವ ಹಕ್ಕು ನಮಗೆ ಇದೆ ಎಂದು ಅವರು ಹೇಳಿದರು.

ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರಯ್ಯ ಅಂಜುಮ್, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ಮಾತನಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ಹರಿಪ್ರಸಾದ್ ರೈ, ಪ್ರಖ್ಯಾತ್ ಶೆಟ್ಟಿ, ಮುರಳಿ ಶೆಟ್ಟಿ, ಅನಿತಾ ಡಿಸೋಜ, ಮಹಾಬಲ ಕುಂದರ್, ಸುರೇಶ್ ಶೆಟ್ಟಿ ಬನ್ನಂಜೆ, ದಿನಕರ ಶೆಟ್ಟಿ, ಹರೀಶ್ ಕಿಣಿ, ಸತೀಶ್ ಮಂಚಿ, ಕೀರ್ತಿ ಶೆಟ್ಟಿ, ಸಂತೋಷ್ ಕುಲಾಲ್, ಸತೀಶ್ ಕೊಡವೂರು ಮೊದಲಾದವರು ಉಪಸ್ಥಿತರಿದ್ದರು.

‘ನೀಟ್ ಹಗರಣದಿಂದ ನಮ್ಮ ದೇಶದ 21 ಮಂದಿ ಅಮಾಯಕ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡರೂ ನಮ್ಮ ದೇಶದ ಪ್ರಧಾನಿ ಒಂದು ತೊಟ್ಟು ಕಣ್ಣೀರು ಹರಿಸುವುದಿಲ್ಲ ಅಂದರೆ ಎಂತಹ ಕ್ರೂರ ಮನಸ್ಸು ಇರಬಹುದು. ಶಿಕ್ಷಣ ಇಲಾಖೆಯಲ್ಲಿ ಇಷ್ಟೆಲ್ಲ ಹಗರಣಗಳಾಗುತ್ತಿದ್ದರೂ ಎಪಿವಿಪಿ ಎಲ್ಲಿಗೆ ಹೋಗಿದೆ. ಒಂದೇ ಒಂದು ಪ್ರತಿಭಟನೆ ಇಲ್ಲ. ಅವರಿಗೆ ಈ ದೇಶದ ಜನರಿಗೆ ಒಳಿತನ್ನು ಮಾಡುವ ರಾಜಕಾರಣ ಬೇಕಿಲ್ಲ. ಸೈದ್ಧಾಂತಿಕತೆ ಹಾಗೂ ಹಿಂದುತ್ವದ ಹೆಸರಿನಲ್ಲಿ ಆಡಳಿತದಲ್ಲಿ ಶಾಶ್ವತವಾಗಿ ಕುಳಿತುಕೊಳ್ಳಬೇಕಾಗಿದೆ’

-ಎಂ.ಜಿ.ಹೆಗಡೆ, ಕಾಂಗ್ರೆಸ್ ಮುಖಂಡರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X