ಕೊಲ್ಲೂರು ದೇವಳಕ್ಕೆ ಕೇರಳ ಸಿಎಂ ವಿ.ಡಿ.ಸತೀಶನ್ ಭೇಟಿ

ಕೊಲ್ಲೂರು, ಜು.11: ಕೇರಳ ಮುಖ್ಯಮಂತ್ರಿ ವಿ.ಡಿ.ಸತೀಶನ್ ಶನಿವಾರ ಬೆಳಿಗ್ಗೆ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದರು.
ಶುಕ್ರವಾರ ರಾತ್ರಿಯೇ ಕೊಲ್ಲೂರಿಗೆ ಆಗಮಿಸಿದ್ದ ಅವರು ಶನಿವಾರ ಮುಂಜಾನೆ ದೇವರ ದರ್ಶನ ಪಡೆದರು. ಈ ಸಂದರ್ಭ ದೇವಸ್ಥಾನದ ವತಿಯಿಂದ ಮುಖ್ಯಮಂತ್ರಿ ವಿ.ಡಿ.ಸತೀಶನ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.
ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಘುರಾಮ್ ದೇವಾಡಿಗ, ಸುರೇಂದ್ರ ಶೆಟ್ಟಿ, ಧನಾಕ್ಷಿ ವಿಶ್ವನಾಥ ಪೂಜಾರಿ, ಮಹಾಲಿಂಗ ನಾಯ್ಕ್, ಮೊದಲಾದವರು ಉಪಸ್ಥಿತರಿದ್ದರು.
ದೇವಿ ದರ್ಶನದ ಬಳಿಕ ಅಭಿಮಾನಿಗಳ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ಮೂಲಕ ಸಿಎಂ ಸತೀಶನ್ ಅವರು ಸರಳತೆ ಪ್ರದರ್ಶಿಸಿದರು. ಸಿಎಂ ಆಗಮನದ ಹಿನ್ನೆಲೆಯಲ್ಲಿ ಕೊಲ್ಲೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.




