Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿಶೇಷಚೇತನರಿಗೆ ಸ್ವಾಭಿಮಾನಿ ಬದುಕು...

ವಿಶೇಷಚೇತನರಿಗೆ ಸ್ವಾಭಿಮಾನಿ ಬದುಕು ಕಲ್ಪಿಸಬೇಕು: ಜಯಕರ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ11 July 2026 8:00 PM IST
share
ವಿಶೇಷಚೇತನರಿಗೆ ಸ್ವಾಭಿಮಾನಿ ಬದುಕು ಕಲ್ಪಿಸಬೇಕು: ಜಯಕರ ಶೆಟ್ಟಿ

ಕುಂದಾಪುರ, ಜು.10: ವಿಶೇಷಚೇತನರು ಇಂದು ಸಮಾಜದ ಮುಖ್ಯ ವಾಹಿನಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿ ದ್ದಾರೆ. ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಹಲವು ಪ್ರತಿಭೆಗಳಿವೆ. ಅವರಿಗೆ ಸ್ವಾಭಿ ಮಾನದ ಬದುಕನ್ನು ಕಲ್ಪಿಸುವ ಕೆಲಸವನ್ನು ಸಮಾಜ ಮತ್ತು ಸರಕಾರ ಮಾಡಬೇಕಾಗಿದೆ ಎಂದು ಕುಂದಾಪುರ ರೆಡ್‌ಕ್ರಾಸ್‌ನ ಸಭಾಪತಿ ಜಯಕರ ಶೆಟ್ಟಿ ಎಸ್. ಹೇಳಿದ್ದಾರೆ.

ಕುಂದಾಪುರ ತಾಲೂಕು ಪಂಚಾಯತ್ ಸಭಾಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಉಡುಪಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ ಇವರ ಸಹಯೋಗದಲ್ಲಿ ಕುಂದಾಪುರ ಮತ್ತು ಬೈಂದೂರು ತಾಲೂಕು ಮಟ್ಟದ ವಿಕಲಚೇತನರ ಪುನರ್ವಸತಿ ಕಾರ್ಯಕರ್ತರಿಗೆ ನಡೆದ ಒಂದು ದಿನದ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ರಾಜ್ಯ ರೆಡ್‌ಕ್ರಾಸ್ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ, ವಿಕಲಚೇತನರ ಸಬಲೀಕರಣ ಕುರಿತು ಮಾತನಾಡಿದರು. ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ರತ್ನಾ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು.

ಯೋಜನಾ ಸಹಾಯಕ ಶಿವಾಜಿ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಡಾ.ಶ್ರೇಯಾ, ವೈಶಾಖ್ ವಾರಂಬಳ್ಳಿ, ನೆಲಿಶಾ ನಾಯಕ್, ಶಿಕ್ಷಣ ಸಂಪನ್ಮೂಲ ಕೇಂದ್ರದ ಶಂಕರ್, ನಿವೃತ್ತ ಅಧಿಕಾರಿ ನಿರಂಜನ ಭಟ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

ಕುಂದಾಪುರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಕೆ.ಜಿ, ಪುರಸಭೆ ಮುಖ್ಯಾಧಿಕಾರಿ ಆನಂದ ಜೆ, ಶಿಶು ಅಭಿವೃದ್ಧಿ ಅಧಿಕಾರಿ ಉಮೇಶ್ ಟಿ.ಎಸ್, ಕುಂದಾಪುರ ತಾಲೂಕು ಪುನರ್ವಸತಿ ಕಾರ್ಯಕರ್ತ ರಾದ ಮಂಜುನಾಥ್ ಹೆಬ್ಬಾರ್, ಬೈಂದೂರು ತಾಲೂಕು ಪುನರ್ವಸತಿ ಕಾರ್ಯಕರ್ತರಾದ ಸವಿತಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಜಯಶ್ರೀ ಸ್ವಾಗತಿಸಿದರೆ, ಸದಸ್ಯ ಕಾರ್ಯದರ್ಶಿ ಡಾ.ಗಣನಾಥ ಶೆಟ್ಟಿ ಎಕ್ಕಾರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X