Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯ ತ್ಯಾಜ್ಯ ಘಟಕಗಳಲ್ಲಿ...

ಉಡುಪಿ ಜಿಲ್ಲೆಯ ತ್ಯಾಜ್ಯ ಘಟಕಗಳಲ್ಲಿ ನಿಗೂಢ ಬೆಂಕಿ ಅನಾಹುತಗಳ ಸರಣಿ; ಸಮಗ್ರ ತನಿಖೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ14 July 2026 10:25 PM IST
share
ಉಡುಪಿ ಜಿಲ್ಲೆಯ ತ್ಯಾಜ್ಯ ಘಟಕಗಳಲ್ಲಿ ನಿಗೂಢ ಬೆಂಕಿ ಅನಾಹುತಗಳ ಸರಣಿ; ಸಮಗ್ರ ತನಿಖೆಗೆ ಆಗ್ರಹ

ಉಡುಪಿ, ಜು.14: ಉಡುಪಿ ಜಿಲ್ಲೆಯ ವಿವಿಧ ತ್ಯಾಜ್ಯ ವಿಲೇವಾರಿ ಘಟಕಗಳಲ್ಲಿ ಪದೇ ಪದೇ ಸಂಭವಿಸುತ್ತಿರುವ ಬೆಂಕಿ ಅವಘಡಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಅನುಮಾನಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ಸಮಗ್ರ ತನಿಖೆ ನಡೆಸಬೇಕು ಎಂದು ಹೆಬ್ರಿಯ ಸಾಮಾಜಿಕ ಹೋರಾಟಗಾರ ಶ್ರೀಕಾಂತ್ ಕುಚ್ಚೂರು ಒತ್ತಾಯಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಕೋಟೇಶ್ವರ, ವಾರಂಬಳ್ಳಿ, ಹೆಬ್ರಿ ತಾಲೂಕಿನ ಬೆಳ್ವೆಯ ಎಸ್‌ಎಲ್‌ಆರ್‌ಎಂ ಘಟಕ, ಹೆಬ್ರಿ ತಾಲೂಕಿನ 16 ಗ್ರಾಮಗಳಿಗೆ ಸಂಬಂಧಿಸಿದ ಎಂಆರ್‌ಎಫ್ ಘಟಕ ಹಾಗೂ ಇತ್ತೀಚೆಗೆ ಕಾರ್ಕಳ ಪುರಸಭೆ ವ್ಯಾಪ್ತಿಯ ಕರಿಯಕಲ್ಲಿನ ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ ಅವಘಡಗಳು ಸಂಭವಿಸಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದವರು ಹೇಳಿದರು.

ಈ ಘಟಕಗಳಲ್ಲಿ ಕೇವಲ ಕಸ ತ್ಯಾಜ್ಯ ಮಾತ್ರವಲ್ಲದೆ, ಲಕ್ಷಾಂತರ ರೂಪಾಯಿ ಮೌಲ್ಯದ ಯಂತ್ರೋಪಕರಣಗಳು, ಮೆಷಿನರಿಗಳು ಹಾಗೂ ಕಟ್ಟಡಗಳು ಸುಟ್ಟುಹೋಗುತ್ತಿರುವುದು ಗಂಭೀರ ವಿಷಯವಾಗಿದೆ. ಈ ಕುರಿತು ಸಂಬಂಧ ಪಟ್ಟ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಸಮರ್ಪಕ ಉತ್ತರ ಸಿಗದೆ, ಹಾರಿಕೆ ರೀತಿಯ ಸ್ಪಷ್ಟಿಕರಣಗಳನ್ನು ನೀಡಲಾಗುತ್ತಿದೆ ಎಂದು ಅವರು ದೂರಿದರು.

ಹೆಬ್ರಿಯ ಎಸ್‌ಎಲ್‌ಆರ್‌ಎಂ ಘಟಕದಲ್ಲಿ ಬೇಸಿಗೆಯ ಬಿಸಿಲಿನ ಶಾಖದಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಅಧಿಕಾರಿ ಗಳು ಹೇಳುತ್ತಿದ್ದಾರೆ. ಆದರೆ ಮಳೆಗಾಲದಲ್ಲಿಯೂ ಕಾರ್ಕಳದ ಕರಿಯಕಲ್ಲಿನ ಡಂಪಿಂಗ್ ಯಾರ್ಡ್ ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದಕ್ಕೆ ಏನು ಕಾರಣ ಎಂಬುದನ್ನು ಅಧಿಕಾರಿಗಳು ಸ್ಪಷ್ಟಪಡಿಸಬೇಕಿದೆ ಎಂದು ಅವರು ಪ್ರಶ್ನಿಸಿದರು.

ಸಾರ್ವಜನಿಕರ ತೆರಿಗೆ ಹಣದಿಂದ ಸ್ವಚ್ಛ ಭಾರತ್ ಯೋಜನೆಯಡಿ ನಿರ್ಮಿಸಲಾದ ಈ ಘಟಕಗಳಿಗೆ ಪದೇ ಪದೇ ಬೆಂಕಿ ಬೀಳುತ್ತಿರುವುದು ಸಾರ್ವಜನಿಕರಲ್ಲಿ ಅನುಮಾನ ಮೂಡಿಸಿದೆ. ಬೆಂಕಿಯಿಂದ ಹಾನಿಗೊಳಗಾದ ಘಟಕಗಳನ್ನು ಮರುನಿರ್ಮಿಸಲು ಮತ್ತೆ ಕೋಟ್ಯಂತರ ರೂಪಾಯಿ ಸಾರ್ವಜನಿಕ ಹಣವನ್ನು ಖರ್ಚು ಮಾಡಬೇಕಾಗುತ್ತದೆ. ಆದ್ದರಿಂದ ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳು ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ, ಸಮಗ್ರ ಹಾಗೂ ಪಾರದರ್ಶಕ ತನಿಖೆ ನಡೆಸಿ, ಸಾರ್ವಜನಿಕರಲ್ಲಿ ಮೂಡಿರುವ ಅನುಮಾನಗಳಿಗೆ ಉತ್ತರ ನೀಡಬೇಕು ಎಂದು ಶ್ರೀಕಾಂತ್ ಕುಚ್ಚೂರು ಜಿಲ್ಲಾಧಿಕಾರಿಗಳಲ್ಲಿ ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X