ಪತ್ರಕರ್ತ ನಾಗೇಶ್ ಗಾಣಿಗರಿಗೆ ಸಂಘದಿಂದ ನುಡಿನಮನ

ಕುಂದಾಪುರ, ಜು.17: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ, ಪತ್ರಕರ್ತ ನಾಗೇಶ್ ಗಾಣಿಗ ಸಿದ್ದಾಪುರ ಅವರಿಗೆ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನುಡಿನಮನ ಹಾಗೂ ಶ್ರದ್ಧಾಂಜಲಿ ಸಭೆಯು ಶುಕ್ರವಾರ ಕುಂದಾಪುರ ಪ್ರೆಸ್ ಕ್ಲಬ್‌ನಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಅವರು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ನಾಗೇಶ್ ಗಾಣಿಗ ಅವರು ನಮ್ಮ ಸಂಘದ ಎಲ್ಲ ಚಟುವಟಿಕೆಗಳಲ್ಲೂ ಸಕ್ರೀಯರಾಗಿ ತೊಡಗಿಸಿಕೊಳ್ಳುತ್ತಿದ್ದರು ಎಂದರು.
ಎಲ್ಲರೊಂದಿಗೆ ಸ್ನೇಹದಿಂದ ವರ್ತಿಸುವ ವ್ಯಕ್ತಿತ್ವವಿತ್ತು. ಮನೆ, ಕುಟುಂಬದ ಜವಾಬ್ದಾರಿ ಹೊತ್ತಿದ್ದರು. ಅನಾರೋಗ್ಯವಿರುವ ತಾಯಿ, ವಿಶೇಷಚೇತನ ಸಹೋದರನ ಆರೈಕೆ, ಸಹಿತ ಆ ಮನೆಗೆ ನಾಗೇಶ್ ಅವರೇ ಆಧಾರ ಆಗಿದ್ದರು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್ ಬೀಜಾಡಿ ಹೇಳಿದರು.
ಸಂಘದ ಉಪಾಧ್ಯಕ್ಷ ಸತೀಶ್ ಆಚಾರ್, ಸದಸ್ಯ ಎ.ಭಾಸ್ಕರ ಶೆಟ್ಟಿ ನುಡಿನಮನ ಸಲ್ಲಿಸಿದರು. ಜಿಲ್ಲಾ ಸಂಘದ ಕಾರ್ಯದರ್ಶಿ ಟಿ. ಲೋಕೇಶ್ ಆಚಾರ್ಯ ತೆಕ್ಕಟ್ಟೆ, ಜಿಲ್ಲಾ ಪದಾಧಿಕಾರಿಗಳಾದ ಚಂದ್ರಮ ತಲ್ಲೂರು, ಯೋಗೀಶ್ ಕುಂಭಾಶಿ, ತಾಲೂಕು ಸಂಘದ ಉಪಾಧ್ಯಕ್ಷ ಸಂತೋಷ್ ಕುಂದೇಶ್ವರ, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಸಂಘದ ಕೋಶಾಧಿಕಾರಿ ಶ್ರೀಕಾಂತ್ ಹೆಮ್ಮಾಡಿ ಕಾರ್ಯಕ್ರಮ ನಿರೂಪಿಸಿದರು.




