Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಸಹಾಯಕ ಸ್ಥಿತಿಯಲ್ಲಿದ್ದ ಹಿರಿಯ ಮಹಿಳೆ...

ಅಸಹಾಯಕ ಸ್ಥಿತಿಯಲ್ಲಿದ್ದ ಹಿರಿಯ ಮಹಿಳೆ ಕುಟುಂಬಕ್ಕೆ ಮರುಸೇರ್ಪಡೆ

ವಾರ್ತಾಭಾರತಿವಾರ್ತಾಭಾರತಿ25 July 2026 9:12 PM IST
share
ಅಸಹಾಯಕ ಸ್ಥಿತಿಯಲ್ಲಿದ್ದ ಹಿರಿಯ ಮಹಿಳೆ ಕುಟುಂಬಕ್ಕೆ ಮರುಸೇರ್ಪಡೆ

ಉಡುಪಿ, ಜು.25: ಆದಿ ಉಡುಪಿ ಪರಿಸರದಲ್ಲಿ ಅಸಹಾಯಕ ಸ್ಥಿತಿಯ ಲ್ಲಿದ್ದ 62 ವರ್ಷದ ರಂಗಮ್ಮ ಎನ್ನುವವರನ್ನು ಮಹಿಳಾ ಪೊಲೀಸ್ ಠಾಣೆ, ಉಡುಪಿ ಸಿಬ್ಬಂದಿಗಳು ರಕ್ಷಿಸಿ ತಾತ್ಕಾಲಿಕ ಆಶ್ರಯಕ್ಕಾಗಿ ಸಖಿ ಸೆಂಟರ್, ನಿಟ್ಟೂರಿಗೆ ದಾಖಲಿಸಿದ್ದು, ಬಳಿಕ ವಿಶೇಷ ಪ್ರಯತ್ನದ ಮೂಲಕ ಅವರ ಸಂಬಂಧಿಕರನ್ನು ಹುಡುಕಿ ಕುಟುಂಬಕ್ಕೆ ಮರು ಸೇರ್ಪಡೆಗೊಳಿಸುವಲ್ಲಿ ಯಶಸ್ಸು ಸಾಧಿಸಲಾಗಿದೆ.

ಈ ಪ್ರಕರಣದ ಕುರಿತು ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಸಿಬ್ಬಂದಿಗಳು ಸಖಿ ಸೆಂಟರ್‌ಗೆ ಭೇಟಿ ನೀಡಿ ವಿಚಾರಣೆ ನಡೆಸಿದಾಗ, ತಮ್ಮ ಹೆಸರು ರಂಗಮ್ಮ ಎಂದು ತಿಳಿಸಿದ್ದು, ಪತಿ ನಿಧನರಾಗಿರುವುದಾಗಿ ಹಾಗೂ ಭದ್ರಮ್ಮ ಮತ್ತು ಸುಮನ್ ಎಂಬ ಇಬ್ಬರು ಮಕ್ಕಳಿರುವುದಾಗಿ ಮಾಹಿತಿ ನೀಡಿದರು. ತಮ್ಮ ಮೂಲ ನಿವಾಸವು ತೆಲಂಗಾಣದ ನಗರಂ ಕಾಲೋನಿಯಾಗಿದ್ದು, ಕಳೆದ ಎರಡು ವರ್ಷಗಳಿಂದ ಮಕ್ಕಳೊಂದಿಗೆ ಯಾವುದೇ ಸಂಪರ್ಕವಿಲ್ಲ ಎಂದು ತಿಳಿಸಿದರು.

ಪ್ರಸ್ತುತ ರಂಗಮ್ಮ ಅವರಿಗೆ ಆಶ್ರಯವಿಲ್ಲದಿರುವುದರಿಂದ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಸೂಚನೆಯ ಮೇರೆಗೆ, ಅವರ ಸಂಬಂಧಿಕರು ಪತ್ತೆಯಾಗುವವರೆಗೆ ಹೊಸ ಬೆಳಕು ಆಶ್ರಮಕ್ಕೆ ದಾಖಲಿಸಲಾಯಿತು. ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಯೋಜನಾ ಸಂಯೋಜಕರಾದ ರೋಶನ್ ಕೆ. ಹಾಗೂ ಆಪ್ತ ಸಮಾಲೋಚಕರಾದ ನಯನ ಅವರು ಈ ಪ್ರಕ್ರಿಯೆಯನ್ನು ನೆರವೇರಿಸಿದ್ದರು.

ರಂಗಮ್ಮ ಅವರ ಮಕ್ಕಳನ್ನು ಪತ್ತೆಹಚ್ಚುವಂತೆ ಉಡುಪಿ ನಗರ ಪೊಲೀಸ್ ಠಾಣೆಗೆ ಹಿರಿಯ ನಾಗರಿಕರ ಸಹಾಯ ವಾಣಿ ಕೇಂದ್ರದಿಂದ ಮನವಿ ಮಾಡಲಾಯಿತು.ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯ ಎಎಸ್‌ಐ ವಿಜಯ್ ಹಾಗೂ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹನುಮಂತಪ್ಪ ವಿಭೂತಿ ಅವರು ರಂಗಮ್ಮ ಅವರು ನೀಡಿದ ವಿಳಾಸದ ಆಧಾರದ ಮೇಲೆ ತೆಲಂಗಾಣಕ್ಕೆ ತೆರಳಿ ವಿಚಾರಣೆ ನಡೆಸಿ, ಅವರ ಮಗ ಸುಮನ್ ಅವರ ವಿಳಾಸವನ್ನು ಪತ್ತೆಹಚ್ಚಿದರು.

ನಂತರ ಸುಮನ್ ಅವರನ್ನು ಉಡುಪಿಗೆ ಕರೆತಂದು ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರಕ್ಕೆ ಹಾಜರುಪಡಿಸಿ ದರು. ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಲ್ಲಿ ’ಹಿರಿಯ ನಾಗರಿಕರ ಪಾಲನೆ ಮತ್ತು ಕಲ್ಯಾಣ ಕಾಯ್ದೆ- 2007’ ಕುರಿತು ಮಗನಿಗೆ ಮಾಹಿತಿ ನೀಡಿ, ತಾಯಿಯನ್ನು ಗೌರವದಿಂದ ಪಾಲನೆ-ಪೋಷಣೆ ಮಾಡುವಂತೆ ಕಾನೂನು ಸಲಹೆ ನೀಡಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಸುಮನ್ ಅವರು, ಇನ್ನು ಮುಂದೆ ತಾಯಿಯನ್ನು ಪ್ರೀತಿಯಿಂದ ಚೆನ್ನಾಗಿ ನೋಡಿಕೊಳ್ಳುತ್ತೇನೆ. ಇಂತಹ ಪರಿಸ್ಥಿತಿ ಮತ್ತೆ ಉಂಟಾಗದಂತೆ ಜವಾಬ್ದಾರಿಯಿಂದ ನಡೆದುಕೊಳ್ಳುತ್ತೇನೆ ಎಂದು ಭರವಸೆ ನೀಡಿದರು ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ ರಂಗಮ್ಮ ಅವರನ್ನು ಹೊಸ ಬೆಳಕು ಆಶ್ರಮದಿಂದ ಬಿಡುಗಡೆಗೊಳಿಸಿ, ಅವರ ಮಗ ಸುಮನ್ ಅವರೊಂದಿಗೆ ಸುರಕ್ಷಿತವಾಗಿ ಮನೆಗೆ ಕಳುಹಿಸಲಾಯಿತು.

ಈ ಪ್ರಕರಣದ ಕಾನೂನು ಪ್ರಕ್ರಿಯೆಯನ್ನು ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಯೋಜನಾ ಸಂಯೋಜಕ ರಾದ ರೋಶನ್ ಕೆ. ಹಾಗೂ ಆಪ್ತ ಸಮಾಲೋಚಕರಾದ ನಯನ ಅವರು ಯಶಸ್ವಿಯಾಗಿ ನಿರ್ವಹಿಸಿದರು.

ಈ ಪ್ರಕರಣವನ್ನು ಯಶಸ್ವಿಯಾಗಿ ಇತ್ಯರ್ಥಗೊಳಿಸುವಲ್ಲಿ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾರ್ಗದರ್ಶನ ಹಾಗೂ ಮಣಿಪಾಲ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ಸಹಕಾರ ನೀಡಿದ್ದರು. ರಂಗಮ್ಮ ಅವರ ಮಕ್ಕಳನ್ನು ಪತ್ತೆಹಚ್ಚುವ ಕಾರ್ಯದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಎಎಸ್‌ಐ ವಿಜಯ್ ಹಾಗೂ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹನುಮಂತಪ್ಪ ವಿಭೂತಿ ಅವರು ಶ್ರಮಿಸಿದರು. ರಂಗಮ್ಮ ಅವರಿಗೆ ತಾತ್ಕಾಲಿಕ ಆಶ್ರಯ ಹಾಗೂ ಆರೈಕೆ ಒದಗಿಸಿದ ಹೊಸ ಬೆಳಕು ಆಶ್ರಮದ ಸಂಚಾಲಕಿ ತನುಲಾ ತರುಣ್ ಅವರ ಸಹಕಾರದಿಂದ ಪ್ರಕರಣದ ಯಶಸ್ವಿಯಾಗಿ ಇತ್ಯರ್ಥಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X