ಕುಂದಾಪುರ: ನೀಟ್ ಪರೀಕ್ಷೆಗೆ ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಕ್ಕೆ ಪರಿಹಾರ ನೀಡಲು ಆಗ್ರಹಿಸಿ ಪ್ರತಿಭಟನೆ

ಕುಂದಾಪುರ, ಜು.26: ನೀಟ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಪರೀಕ್ಷೆ ಮುಂದೂಡಿದ್ದರಿಂದ ನೊಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರ ನೀಡಲು, ಎನ್ಟಿಎ ರದ್ದುಗೊಳಿಸಲು ಆಗ್ರಹಿಸಿ, ದೆಹಲಿ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲಿಸಿ ರವಿವಾರ ಕುಂದಾಪುರ ಸಾರ್ವಜನಿಕ ಆಸ್ಪತ್ರೆ ಹತ್ತಿರ ಇರುವ ಬೆವರು ಕಟ್ಟಡದ ಮುಂಭಾಗದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಶಿಕ್ಷಣದ ವ್ಯಾಪಾರೀಕರಣ, ರಾಷ್ಟ್ರೀಯ ಶಿಕ್ಷಣ ನೀತಿ-2020 ರದ್ದುಪಡಿಸಲು ಪ್ರತಿಭಟನಕಾರರು ಆಗ್ರಹಿಸಿದರು. ಹಾಗೂ ದಿಲ್ಲಿಯಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಸಿದ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ನಡೆಸಿದ ಕೃತ್ಯವನ್ನು ಅವರು ಖಂಡಿಸಿದರು.
ಎಸ್‌ಎಫ್‌ಐ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿಘ್ನೇಶ್, ಗಣೇಶ್, ರಾಜ ಬಿಟಿಆರ್, ಗಣೇಶ್ ಕಲ್ಲಾಗರ ಮೊದಲಾದವರು ಭಾಗವಹಿಸಿದ್ದರು.
Next Story




