Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ| ರಾಹುಲ್ ಗಾಂಧಿ ವಿರುದ್ದ ಧ್ವೇಷ...

ಉಡುಪಿ| ರಾಹುಲ್ ಗಾಂಧಿ ವಿರುದ್ದ ಧ್ವೇಷ ಭಾಷಣ: ಶಾಸಕ ಯಶ್‌ಪಾಲ್ ವಿರುದ್ಧ ವ್ಯಾಪಾಕ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ29 July 2026 7:27 PM IST
share
ಉಡುಪಿ| ರಾಹುಲ್ ಗಾಂಧಿ ವಿರುದ್ದ ಧ್ವೇಷ ಭಾಷಣ: ಶಾಸಕ ಯಶ್‌ಪಾಲ್ ವಿರುದ್ಧ ವ್ಯಾಪಾಕ ಆಕ್ರೋಶ

ಉಡುಪಿ, ಜು.29: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ದ ಧ್ವೇಷ ಭಾಷಣ ಮಾಡಿದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ವ್ಯಾಪಾಕ ಆಕ್ರೋಶ ವ್ಯಕ್ತವಾಗಿದ್ದು, ಈ ಕ್ರಮವನ್ನು ವಿವಿಧ ಮುಖಂಡರು, ಸಂಘಟನೆಗಳು ತೀವ್ರವಾಗಿ ಖಂಡಿಸಿವೆ.

‘ಎನ್‌ಡಿಎ ಸರ್ಕಾರವೇ ತನ್ನ ತಪ್ಪನ್ನು ಅರಿತು ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾಯ್ದೆ ತಂದಿದ್ದರೂ ಉಡುಪಿ ಬಿಜೆಪಿ ಮುಖಂಡರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಉಡುಪಿ ಸಹಿತ ಜಿಲ್ಲೆಯ ಶಾಸಕರು ಅಸಂಬದ್ಧವಾಗಿ ಮಾತ ನಾಡಿದ್ದಾರೆ. ಇಡೀ ವಿದ್ಯಾರ್ಥಿ ಸಮೂಹವನ್ನು ನಿಂದಿಸಿದ್ದಾರೆ. ವಿದ್ಯಾರ್ಥಿಗಳನ್ನು ಭಯೋತ್ಪಾದಕರು ಎಂಬಂತೆ ಬಿಂಬಿಸಿದ್ದಾರೆ. ಸಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಹೀಯಾಳಿಸಿದ್ದಾರೆ. ಇದು ಬಿಜೆಪಿ ಪಕ್ಷಕ್ಕೆ ಶೋಭೆ ತರುವುದಿಲ್ಲ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ,ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಬಗ್ಗೆಯೂ ಪ್ರತಿಭಟನೆಯಲ್ಲಿ ಹಗುರವಾಗಿ ಮಾತನಾಡಿದ್ದು ಖಂಡನೀಯ ಎಂದು ಉಡುಪಿ ಕಾಂಗ್ರೆಸ್ ಮುಖಂಡ ಪ್ರಸಾದ್‌ರಾಜ್ ಕಾಂಚನ್ ತಿಳಿಸಿದ್ದಾರೆ.

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಗ್ಗೆ ಆಕ್ಷೇ ಪಾರ್ಹ ಮಾತುಗಳನ್ನಾಡಿರುವುದು ಖಂಡನೀಯ. ರಾಜಕೀಯದಲ್ಲಿ ವಿಭಿನ್ನ ಸಿದ್ದಾಂತಗಳು ಪ್ರಜಾಪ್ರಭುತ್ವದ ಭಾಗವಾಗಿದ್ದು ಟೀಕೆಗಳು ಮತ್ತು ಯಾವುದೇ ಪ್ರತಿಕ್ರಿಯೆಗಳು ಗೌರವಯುತ ಹಾಗೂ ಸೌಜನ್ಯದ ಭಾಷೆಯಲ್ಲಿ ರಬೇಕು. ರಾಹುಲ್ ಗಾಂಧಿಯನ್ನು ಡ್ರಗ್ ಎಡಿಕ್ಟ್ ಎಂದು ನಿಂದಿಸಿ ಅವರ ವಂಶವನ್ನು ಧ್ವಂಸ ಮಾಡುವುದಾಗಿ ಬಹಿರಂಗವಾಗಿ ಹೇಳಿರುವ ಉಡುಪಿ ಶಾಸಕರ ಗೂಂಡಾ ಸಂಸ್ಕೃತಿಯನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಖಂಡಿಸಿದ್ದಾರೆ.

ಲೋಕಸಭೆಯ ವಿರೋಧ ಪಕ್ಷದ ನಾಯಕನ ವಿರುದ್ದ ಶಾಸಕರು ನೀಡಿರುವ ಬಾಲಿಶ ಹೇಳಿಕೆ ಖಂಡನೀಯ. ಅಧಿಕಾರದ ಅಮಲಿನಲ್ಲಿ ನೀಡುತ್ತಿರುವ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ಬಿಜೆಪಿ ನಾಯಕರು ತಕ್ಷಣ ನಿಲ್ಲಿಸಬೇಕು ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಆಗ್ರಹಿಸಿದ್ದಾರೆ.

ಬಿಜೆಪಿ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳನ್ನು ಭಯೋತ್ಪಾದಕರು ಹಾಗೂ ದೇಶದ್ರೋಹಿಗಳಂತೆ ಬಿಂಬಿಸಿರುವುದು ಖಂಡನೀಯ. ವಿದ್ಯಾರ್ಥಿಗಳನ್ನು ಭಯೋತ್ಪಾದಕರು ಎಂಬಂತೆ ಬಿಂಬಿಸಿ ಹೀಯಾಳಿಸಿದ್ದು ಬಿಜೆಪಿ ಪಕ್ಷಕ್ಕೆ ಶೋಭೆ ತರುವುದಿಲ್ಲ ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ನವೀನ್ ಸಾಲಿಯಾನ್ ಆರೋಪಿಸಿದ್ದಾರೆ.

ಉಡುಪಿ ವೆಲ್ಫೇರ್ ಪಾರ್ಟಿ: ಉಡುಪಿಯಲ್ಲಿ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆ ಯಲ್ಲಿ ಶಾಸಕ ಯಶ್‌ಪಾಲ್ ಸುವರ್ಣ ಹೋರಾಟಗಾರರು, ರಾಹುಲ್ ಗಾಂಧಿ ಹಾಗೂ ನಟ ಪ್ರಕಾಶ್‌ರಾಜ್ ಅವರ ವಿರುದ್ಧ ಕ್ರಿಮಿನಲ್ ಅಪರಾಧಿ ಗಳಂತೆ ಬಿಂಬಿಸುವ ಹೇಳಿಕೆಗಳನ್ನು ನೀಡಿದ್ದಾರೆ. ಮಣಿಪಾಲ ಮಾಹೆ ವಿಶ್ವವಿದ್ಯಾಲಯದ ಅನಾಮಧೇಯ ಅಧ್ಯಾಪಕರ ವಿರುದ್ಧವೂ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಉಡುಪಿ ಶಾಸಕ ಯಶ್‌ ಪಾಲ್ ಸುವರ್ಣ ವಿರುದ್ಧ ಕಾನೂನುಬದ್ಧ ತನಿಖೆ ನಡೆಸಿ, ಅಗತ್ಯವಿದ್ದಲ್ಲಿ ಬಂಧನ ಸೇರಿದಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಝೀಝ್ ಉದ್ಯಾವರ ಆಗ್ರಹಿಸಿದ್ದಾರೆ.

ಉಡುಪಿ ಎಸ್‌ಡಿಪಿಐ: ಉಡುಪಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮಾಡಿದ ಭಾಷಣವು ಅತ್ಯಂತ ಬೇಜವಾಬ್ದಾರಿಯುತ, ಬೆದರಿಕೆ ದಾಟಿಯ ಹಾಗೂ ಗೂಂಡಾ ಮನಸ್ಥಿತಿ ಯನ್ನು ಪ್ರತಿಬಿಂಬಿ ಸುವ ರೀತಿಯದ್ದಾಗಿದೆ. ಆದ್ದರಿಂದ ರಾಜ್ಯ ಸರಕಾರ ಈ ಹೇಳಿಕೆಗಳ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಎಸ್‌ಡಿಪಿಐ ಉಡುಪಿ ಜಿಲ್ಲಾಧ್ಯಕ್ಷ ಆಸಿಫ್ ಕೋಟೇಶ್ವರ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X