ದೇಶದ ಆರ್ಥಿಕತೆಗೆ ಸಹಕಾರಿ ಕ್ಷೇತ್ರದ ಕೊಡುಗೆ ಮಹತ್ವದ್ದು: ಸತೀಶ್ಚಂದ್ರ

ಶಿರ್ವ, ಜು.30: ಗ್ರಾಮೀಣ ಆರ್ಥಿಕತೆಯನ್ನು ಸದೃಢಗೊಳಿಸುವಲ್ಲಿ ಸಹಕಾರಿ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸು ತ್ತಿವೆ. ದೇಶದ ಆರ್ಥಿಕತೆಗೆ ಸಹಕಾರಿ ಕ್ಷೇತ್ರದ ಕೊಡುಗೆ ಅತ್ಯಂತ ಮಹತ್ವದ್ಧಾಗಿದೆ ಎಂದು ಸಹಕಾರ ಭಾರತಿ ರಾಷ್ಟ್ರೀಯ ಸಂಘಟನಾ ಪ್ರಮುಖ ಎಸ್.ಆರ್.ಸತೀಶ್ಚಂದ್ರ ಹೇಳಿದ್ದಾರೆ.
ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಮಂಗಳವಾರ ನಡೆದ ಸಹಕಾರ ಭಾರತಿ ಮೈಸೂರು ವಿಭಾಗದ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಅಧ್ಯಕ್ಷತೆಯನ್ನು ಸಹಕಾರ ಭಾರತಿ ರಾಜ್ಯ ಉಪಾಧ್ಯಕ್ಷ ಸುಬ್ರಹ್ಮಣ್ಯ ಎಡಗೆರೆ ವಹಿಸಿದ್ದರು. ವೇದಿಕೆಯಲ್ಲಿ ರಾಜ್ಯ ಮಹಿಳಾ ಪ್ರಮುಖ್ ವಿದ್ಯಾ ಪೈ, ರಾಷ್ಟ್ರೀಯ ಗ್ರಾಹಕ ಭಂಡಾರ ಪ್ರಮುಖ್ ಭಾರತಿ ಭಟ್, ರಾಷ್ಟ್ರೀಯ ಕಾರ್ಯಕಾ ರಿಣೀ ಸದಸ್ಯರಾದ ಮಂಜುನಾಥ ಎಸ್.ಕೆ., ರಾಜ್ಯ ಸಂಘಟನಾ ಕಾರ್ಯದರ್ಶಿ ಮಂಜುನಾಥ ಬಿ.ಆರ್., ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾವತ್, ರಾಜ್ಯ ಕಾರ್ಯದರ್ಶಿ ಮಾಧುಸ್ವಾಮಿ ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾಧ್ಯಕ್ಷ ದಿನೇಶ್ ಹೆಗಡೆ ಆತ್ರಾಡಿ ಸ್ವಾಗತಿಸಿದರು. ಮೈಸೂರು ವಿಭಾಗ ಪ್ರಮುಖ್ ಮೋಹನ್ ಕುಂಬಳೇಕಾರ್ ಕಾರ್ಯಕ್ರಮ ನಿರೂಪಿಸಿದರು. ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಸಹಕಾರ ಭಾರತಿ ಉಡುಪಿ ಜಿಲ್ಲಾ ಕೋಶಾಧ್ಯಕ್ಷ ಕುತ್ಯಾರು ಪ್ರಸಾದ್ ಶೆಟ್ಟಿ ವಂದಿಸಿದರು.
ಸಭೆಯಲ್ಲಿ ಮೈಸೂರು ನಗರ, ಮೈಸೂರು ಗ್ರಾಮಾಂತರ, ಹಾಸನ, ಮಂಡ್ಯ, ಕೊಡಗು, ದಕ್ಷಿಣ ಕನ್ನಡ, ಮಂಗಳೂರು ಮಹಾನಗರ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಂದ ಸುಮಾರು 40 ಮಂದಿ ಪ್ರತಿನಿಧಿಗಳು






