ಪತ್ರಕರ್ತ ಸುರೇಶ್ ಪಳ್ಳಿಗೆ ನಾರದ ಪುರಸ್ಕಾರ ಪ್ರಶಸ್ತಿ

ಮಂಗಳೂರು, ಜು.31: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ ಮಹರ್ಷಿ ನಾರದರ ಸಂಸ್ಮರಣೆಯಲ್ಲಿ ನೀಡಲಾಗುವ ನಾರದ ಪುರಸ್ಕಾರ ಪ್ರಶಸ್ತಿಗೆ ಹೊಸದಿಗಂತ ಪತ್ರಿಕೆಯ ಮಂಗಳೂರು ಆವೃತ್ತಿಯ ಪ್ರಧಾನ ವರದಿಗಾರ ಸುರೇಶ್ ಡಿ. ಪಳ್ಳಿ ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಆ.4ರಂದು ಸಂಜೆ 4ಕ್ಕೆ ಕಾರಣಗಿರಿಯಲ್ಲಿರುವ ಶ್ರೀ ಸಿದ್ಧಿವಿನಾಯಕ ಸಭಾ ಭವನ ದಲ್ಲಿ ನಡೆಯಲಿದೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿರುವ ಸುರೇಶ್ ಪಳ್ಳಿ ಸುಮಾರು 19 ವರ್ಷಗಳಿಂದ ಹೊಸದಿಗಂತ ಪತ್ರಿಕೆಯ ವರದಿಗಾರರಾಗಿದ್ದಾರೆ. 2013ರಲ್ಲಿ ಅತ್ಯುತ್ತಮ ಗ್ರಾಮೀಣ ವರದಿಗಾಗಿ ಪ.ಗೋ ಪ್ರಶಸ್ತಿ, 2023ರಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಸುರೇಶ್‌ಗೆ ಲಭಿಸಿತ್ತು.
Next Story




