ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿಗೆ ಪ್ರಸ್ತಾವನೆ ಆಹ್ವಾನ

ಉಡುಪಿ, ಆ.1: ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಅಕ್ಟೋಬರ್ 1ರಂದು ರಾಜ್ಯ ಮಟ್ಟದಲ್ಲಿ ಆಚರಿಸುವ ಹಿನ್ನೆಲೆಯಲ್ಲಿ ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಕ್ರೀಡೆ ಹಾಗೂ ಸಮಾಜ ಸೇವೆಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತಾವನೆಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ 14ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಕಚೇರಿ, ತಳ ಅಂತಸ್ತು ಕೊಠಡಿ ಸಂಖ್ಯೆ 45, ರಜತಾದ್ರಿ ಮಣಿಪಾಲ ದೂ.ಸಂ: 0820-2574810ಅನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story




