ಮಾನವ ಕಳ್ಳ ಸಾಗಾಣಿಕೆ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸಿ: ನ್ಯಾ. ನಿತಿನ್ ವೈ. ರಾವ್

ಉಡುಪಿ: ಮಾನವ ಕಳ್ಳ ಸಾಗಾಣಿಕೆ ಮಾನವೀಯತೆಯ ಮೇಲಾಗುತ್ತಿರುವ ಅತಿ ದೊಡ್ಡ ಅಪರಾಧ. ಇಂತಹ ಕೃತ್ಯ ಗಳನ್ನು ನಿರ್ಮೂಲನೆ ಮಾಡಲು ಭಾಗೀದಾರ ಇಲಾಖೆಗಳು ಶ್ರಮಿಸಿದರೂ ಕೂಡ ಸಂಪೂರ್ಣ ನಿರ್ಮೂಲನೆ ಸಾಧ್ಯ ವಾಗುತ್ತಿಲ್ಲ. ಇದಕ್ಕೆ ಸಾರ್ವಜನಿಕರಲ್ಲಿ ಈ ಬಗ್ಗೆ ಅರಿವು, ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಿತಿನ್ ವೈ.ರಾವ್ ಹೇಳಿದ್ದಾರೆ.
ನಗರದ ಬ್ರಹ್ಮಗಿರಿಯ ಬಾಲಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ ಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ, ಇವರ ಸಹಯೋಗ ದೊಂದಿಗೆ ಆಯೋಜಿಸ ಲಾದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಉಡುಪಿ ಮಹಿಳಾ ಪೊಲೀಸ್ ಠಾಣೆಯ ಪೋಲಿಸ್ ಉಪನಿರೀಕ್ಷಕ ರಾಘವೇಂದ್ರ ಸಿ ಮಾತನಾಡಿ, ಪ್ರಸ್ತುತ ಸಮಾಜ ಎದುರಿಸುತ್ತಿರುವ ಸಾಮಾಜಿಕ ಪಿಡುಗುಗಳಲ್ಲಿ ಒಂದಾದ ಮಾನವ ಕಳ್ಳ ಸಾಗಾಣಿಕೆಯನ್ನು ನಿರ್ಮೂಲನೆ ಮಾಡುವುದು ಅತಿ ಅವಶ್ಯವಾಗಿದೆ. ಕೆಲವೊಂದು ನೈಜಪ್ರಕರಣಗಳ ಉದಾಹರಣೆ ನೀಡುವ ಮೂಲಕ ಯಾವ ರೀತಿಯಲ್ಲಿ ಮಾನವ ಕಳ್ಳಸಾಗಾಣಿಕೆ ನಡೆಯುತ್ತಿದೆ ಎಂಬುದನ್ನು ವಿವರಿಸಿದರು.
ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪ್ರೇಮಮೂರ್ತಿ ಕೆ. ಮಾತನಾಡಿ, ಆಧುನಿಕ ಯುಗದಲ್ಲಿ ವಂಚನೆ ಗಳು ಹೆಚ್ಚುತ್ತಿರಲು ಜನರು ಹೆಚ್ಚು ವ್ಯಾಮೋಹಕ್ಕೆ ಒಳಗಾಗುತ್ತಿರು ವುದು, ತಂತ್ರಜ್ಞಾನಗಳ ಹೆಚ್ಚಿನ ಬಳಕೆ ಮತ್ತು ಹಣದ ಆಮಿಷಕ್ಕೆ ಬಲಿಯಾಗುತ್ತಿ ರುವುದು ಮುಖ್ಯ ಕಾರಣವಾಗಿದೆ. ಇಂದಿನ ಮಕ್ಕಳಲ್ಲಿ ನೈತಿಕ ಮೌಲ್ಯಗಳ ಕೊರತೆ ಕೂಡ ಮಾನವ ಕಳ್ಳ ಸಾಗಾಣಿಕೆ ಹೆಚ್ಚುತ್ತಿರಲು ಕಾರಣವಾಗಿದೆ ಎಂದ ಅವರು, ಮಾನವ ಕಳ್ಳ ಸಾಗಾಣಿಕೆಯನ್ನು ತಡೆಗಟ್ಟುವ ಕುರಿತು ವಿವರಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸಹಾಯಕ ಕಾನೂನು ನೆರವು ಅಭಿರಕ್ಷಕಿ ಭಾನುಮತಿ ಅವರು, ಕಾಯ್ದೆ ಅಡಿ ಹಾಗೂ ಕಾನೂನಿನ ಚೌಕಟ್ಟಿ ನಲ್ಲಿ ಮಾನವ ಕಳ್ಳ ಸಾಗಾಣಿಕೆಯನ್ನು ತಡೆಗಟ್ಟುವ ಮಾರ್ಗಗಳ ಕುರಿತು ವಿವರ ವಾಗಿ ವಿವರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ರತ್ನ, ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರವೀಣ್ ಹೇರೂರ, ಭಾಗಿದಾರ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಹಾಗೂ ಸ್ತ್ರೀ ಶಕ್ತಿ ಗುಂಪಿನ ಮಹಿಳೆಯರು ಉಪಸ್ಥಿತರಿದ್ದರು.
ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಬಿ ಹಾದಿಮನಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜೆಂಡರ್ ಸ್ಪೆಷಲಿಸ್ಟ್ ದೀಪ ಕಾರ್ಯಕ್ರಮ ನಿರೂಪಿಸಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಜಯಲಕ್ಷ್ಮಿ ಹೇರೂರ ವಂದಿಸಿದರು.






