Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗಂಗೊಳ್ಳಿಯಲ್ಲಿ ಮೀನುಗಾರರಿಂದ...

ಗಂಗೊಳ್ಳಿಯಲ್ಲಿ ಮೀನುಗಾರರಿಂದ ಸಮುದ್ರಪೂಜೆ

ವಾರ್ತಾಭಾರತಿವಾರ್ತಾಭಾರತಿ3 Aug 2026 8:47 PM IST
share
ಗಂಗೊಳ್ಳಿಯಲ್ಲಿ ಮೀನುಗಾರರಿಂದ ಸಮುದ್ರಪೂಜೆ

ಕುಂದಾಪುರ, ಆ.3: ಮತ್ಸ್ಯಕ್ಷಾಮ ಬಾರದೆ, ಮೀನುಗಳ ಸಮೃದ್ಧಿ ನೆಲೆಸಿ ಮೀನುಗಾರಿಕೆಗೆ ತೆರಳಿದಾಗ ಯಾವುದೇ ಅಡ್ಡಿ ಆತಂಕಗಳು ಮೀನುಗಾರರಿಗೆ ಎದುರಾಗದಿರಲಿ ಎಂದು ಪ್ರಾರ್ಥಿಸಿ ಗಂಗೊಳ್ಳಿಯಲ್ಲಿ ಮೀನುಗಾರರು ಸೋಮವಾರ ಸಮುದ್ರಪೂಜೆ ನೆರವೇರಿಸಿದರು.

ಗಂಗೊಳ್ಳಿಯ ಅರ್ಚಕ ವೇದಮೂರ್ತಿ ವಿಠಲ್‌ದಾಸ್ ಭಟ್ ನೇತೃತ್ವದಲ್ಲಿ ಸಮುದ್ರ ಪೂಜೆಯ ಧಾರ್ಮಿಕ ವಿಧಿಗಳು ನೆರವೇರಿತು. ಪರ್ಸಿನ್ ಬೋಟ್, ತ್ರಿಸೆವೆಂಟಿ ಬೋಟ್ ಹಾಗೂ ಟ್ರಾಲರ್ ಬೋಟ್‌ಗಳ ಸಂಘದ ಸದಸ್ಯರು ಸಮುದ್ರ ರಾಜನಿಗೆ ಹಾಲು, ಸೀಯಾಳ, ಫಲಪುಷ್ಪವನ್ನು ಅರ್ಪಿಸಿದರು.

ಈ ಸಂದರ್ಭದಲ್ಲಿ ಪರ್ಸಿನ್ ಬೋಟ್‌ಗಳ ಮೀನುಗಾರರ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಮಡಿವಾಳ, ತ್ರಿಸೆವೆಂಟಿ ಬೋಟ್‌ಗಳ ಮೀನುಗಾರರ ಸಂಘದ ಅಧ್ಯಕ್ಷ ಸೌಪರ್ಣಿಕಾ ಬಸವ ಖಾರ್ವಿ, ಟ್ರಾಲರ್ ಬೋಟುಗಳ ಮೀನುಗಾರರ ಸಂಘದ ಅಧ್ಯಕ್ಷ ಗಣೇಶ್ ಖಾರ್ವಿ, ಪ್ರಮುಖರಾದ ಚಂದ್ರ ಖಾರ್ವಿ, ನಾರಾಯಣ ಖಾರ್ವಿ, ರಾಘವೇಂದ್ರ ಮೇಸ್ತ, ಸುಬ್ರಹ್ಮಣ್ಯ ಖಾರ್ವಿ, ನಾಗರಾಜ ಖಾರ್ವಿ, ಬೋಟುಗಳ ಮಾಲಕರು, 3 ಸಂಘಗಳ ಸದಸ್ಯರು, ಮೀನುಗಾರರು ಉಪಸ್ಥಿತರಿದ್ದರು.

ಆ.16ರಿಂದ ಪರ್ಶಿನ್ ಬೋಟ್‌ಗಳು ಕಡಲಿಗೆ

ಕಡಲಿನಲ್ಲಿ ತುಪಾನ್(ಗಾಳಿಯೊತ್ತಡ) ಹೆಚ್ಚಿದೆ. ಹೀಗಾಗಿ ಎರಡು ತಿಂಗಳ ಮೀನುಗಾರಿಕಾ ನಿರ್ಬಂಧ ಜು.31ಕ್ಕೆ ಮುಗಿದಿದ್ದರೂ ಕೂಡ ಕಡಲಿಗಿಳಿಯಲು ಅಸಾಧ್ಯವಾಗಿದೆ. ಗಂಗೊಳ್ಳಿಯಲ್ಲಿ ದಡದಲ್ಲಿದ್ದ ಬೋಟ್‌ಗಳನ್ನು ನೀರಿಗೆ ಇಳಿಸುವ ಕಾರ್ಯ, ಬಲೆ ಹೆಣೆಯುವ, ಇನ್ನಿತರ ಪರಿಕರಗಳನ್ನು ಒಟ್ಟುಗೂಡಿಸುವ, ಬೋಟ್‌ಗಳಿಗೆ ಬಣ್ಣ ಬಳಿಯುವ ಕಾರ್ಯ ಭರದಿಂದ ನಡೆಯುತ್ತಿದೆ. ಗಂಗೊಳ್ಳಿಯಲ್ಲಿ ಆ.16ರ ನಂತರ ಕಡಲಿಗೆ ಇಳಿಯಲು ಸಿದ್ದತೆ ಮಾಡಿಕೊಂಡಿದೆ ಎಂದು ಪರ್ಸಿನ್ ಬೋಟ್‌ಗಳ ಮೀನುಗಾರರ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಮಡಿವಾಳ ಹಾಗೂ ಮುಖಂಡ ರಾದ ಸುಬ್ರಹ್ಮಣ್ಯ ಖಾರ್ವಿ ಉಪ್ಪುಂದ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X