ಕಾರು ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು

ಕುಂದಾಪುರ, ಆ.4: ಕಾರೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಕುಂಭಾಶಿ ಗ್ರಾಮದ ಆನೆಗುಡ್ಡೆ ಸ್ವಾಗತ ಗೋಪುರ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ವಡ್ಡರ್ಸೆ ಗ್ರಾಮದ ಗಣೇಶ್(35) ಎಂದು ಗುರುತಿಸಲಾಗಿದೆ. ಆ.3ರಂದು ರಾತ್ರಿ 10.15ರ ಸುಮಾರಿಗೆ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು, ಎದುರಿನಲ್ಲಿ ಹೋಗುತ್ತಿದ್ದ ಸ್ಕೂಟರ್‌ಗೆ ಹಿಂದಿನಿಂದ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಸ್ಕೂಟರ್ ಸವಾರ ಗಣೇಶ್ ಸ್ಕೂಟರ್ ಸಮೇತ ರಸ್ತೆಗೆ ಬಿದ್ದರು.
ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆ.4ರಂದು ಬೆಳಗಿನ ಜಾವ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




