Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಜ್ಜರಕಾಡು ಉದ್ಯಾನದಲ್ಲಿ ಮೂಲಸೌಕರ್ಯದ...

ಅಜ್ಜರಕಾಡು ಉದ್ಯಾನದಲ್ಲಿ ಮೂಲಸೌಕರ್ಯದ ಕೊರತೆ: ಮಳೆ, ಬಿಸಿಲಿನ ಆಶ್ರಯಕ್ಕೆ ಶೆಡ್ ಇಲ್ಲ

ವಾರ್ತಾಭಾರತಿವಾರ್ತಾಭಾರತಿ6 Aug 2026 8:16 PM IST
share
ಅಜ್ಜರಕಾಡು ಉದ್ಯಾನದಲ್ಲಿ ಮೂಲಸೌಕರ್ಯದ ಕೊರತೆ: ಮಳೆ, ಬಿಸಿಲಿನ ಆಶ್ರಯಕ್ಕೆ ಶೆಡ್ ಇಲ್ಲ
ಮಕ್ಕಳು, ಪೋಷಕರ ಪರದಾಟ

ಉಡುಪಿ, ಆ.6: ಉಡುಪಿ ನಗರದ ಹೃದಯಭಾಗದಲ್ಲಿರುವ ಅಜ್ಜರಕಾಡು ಉದ್ಯಾನವು ನಗರದ ಅತ್ಯಂತ ಜನಪ್ರಿಯ ಸಾರ್ವಜನಿಕ ವಿಹಾರ ತಾಣಗಳಲ್ಲಿ ಒಂದಾಗಿದ್ದರೂ, ಮಳೆ ಹಾಗೂ ತೀವ್ರ ಬಿಸಿಲಿನ ಸಂದರ್ಭದಲ್ಲಿ ಸಾರ್ವಜನಿಕರಿಗೆ ಆಶ್ರಯ ಕಲ್ಪಿಸುವ ಸೂಕ್ತ ಶೆಡ್‌ಗಳ ಕೊರತೆಯಿಂದಾಗಿ ಗಂಭೀರ ಮೂಲಸೌಕರ್ಯ ಸಮಸ್ಯೆಯನ್ನು ಎದುರಿಸುತ್ತಿದೆ.

ಪ್ರತಿದಿನ ನೂರಾರು ಹಿರಿಯ ನಾಗರಿಕರು, ಮಹಿಳೆಯರು, ಮಕ್ಕಳು ಹಾಗೂ ಕುಟುಂಬಗಳು ಈ ಉದ್ಯಾನಕ್ಕೆ ಭೇಟಿ ನೀಡುತ್ತಿದ್ದು, ಏಕಾಏಕಿ ಮಳೆ ಸುರಿದಾಗ ಅಥವಾ ಬಿಸಿಲು ತೀವ್ರವಾದಾಗ ಆಶ್ರಯ ಪಡೆಯಲು ಇಲ್ಲಿ ಯಾವುದೇ ವ್ಯವಸ್ಥೆ ಇಲ್ಲ. ಪರಿಣಾಮವಾಗಿ, ಭೇಟಿ ನೀಡುವವರು ಸಮೀಪದ ವಸತಿ ಕಟ್ಟಡಗಳು ಅಥವಾ ಆಟೋ ರಿಕ್ಷಾ ನಿಲ್ದಾಣ ಗಳಿಗೆ ಓಡಿ ಆಶ್ರಯ ಪಡೆಯಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಸಾರ್ವಜನಿಕರಿಗೆ ತೀವ್ರ ತೊಂದರೆ ಹಾಗೂ ಅಸೌಕರ್ಯ ಉಂಟು ಮಾಡುತ್ತಿದೆ.

ನಿಯಮಿತವಾಗಿ ಉದ್ಯಾನಕ್ಕೆ ಆಗಮಿಸುವ ಸಾರ್ವಜನಿಕರು, ನಗರದ ಪ್ರಮುಖ ಸಾರ್ವಜನಿಕ ಉದ್ಯಾನವಾಗಿ ದ್ದರೂ ಮಳೆ ಹಾಗೂ ಬಿಸಿಲಿನಿಂದ ರಕ್ಷಣೆ ನೀಡುವ ಶೆಡ್‌ಗಳು ಅಥವಾ ಮುಚ್ಚಿದ ಆಸನ ವ್ಯವಸ್ಥೆ ಕಲ್ಪಿಸದಿ ರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಇಂತಹ ಮೂಲಭೂತ ಸೌಲಭ್ಯಗಳ ಕೊರತೆಯಿಂದಾಗಿ, ವಿಶೇಷವಾಗಿ ಮಳೆಗಾಲ ಹಾಗೂ ತೀವ್ರ ಬಿಸಿಲಿನ ದಿನಗಳಲ್ಲಿ ಸಾರ್ವಜನಿಕರು ಉದ್ಯಾನದಲ್ಲಿ ಹೆಚ್ಚು ಸಮಯ ಕಳೆಯಲು ಹಿಂಜರಿಯುವಂತಾಗಿದೆ.

‘ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಉದ್ಯಾನದ ಪ್ರಮುಖ ಸ್ಥಳಗಳಲ್ಲಿ ಸೂಕ್ತ ಆಶ್ರಯ ಶೆಡ್‌ಗಳನ್ನು ನಿರ್ಮಿಸ ಬೇಕು ಎಂದು ಸಾಮಾಜಿಕ ಕಾರ್ಯಕರ್ತ ಎಂ.ಇಕ್ಬಾಲ್ ಮನ್ನಾ ಸಂಬಂಧಪಟ್ಟ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ. ಮಳೆ ಮತ್ತು ಬಿಸಿಲಿನಿಂದ ಸಾರ್ವಜನಿಕರಿಗೆ ರಕ್ಷಣೆ ಒದಗಿಸುವುದು ಅತ್ಯಗತ್ಯ ಮೂಲಭೂತ ಸೌಲಭ್ಯವಾಗಿದ್ದು, ಇದರಿಂದ ಉದ್ಯಾನಕ್ಕೆ ಭೇಟಿ ನೀಡುವವರ ಸುರಕ್ಷತೆ, ಅನುಕೂಲತೆ ಹಾಗೂ ಒಟ್ಟಾರೆ ಅನುಭವವು ಗಮನಾರ್ಹವಾಗಿ ಉತ್ತಮವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಅಜ್ಜರಕಾಡು ಉದ್ಯಾನವು ಉಡುಪಿಯ ಪ್ರಮುಖ ಸಾರ್ವಜನಿಕ ಉದ್ಯಾನಕ್ಕೆ ತಕ್ಕಂತೆ ಅಗತ್ಯ ಮೂಲಸೌಲಭ್ಯ ಗಳನ್ನು ಹೊಂದುವಂತೆ ಈ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಕೈಗೊಂಡು ಶೀಘ್ರದಲ್ಲಿ ಪೂರ್ಣ ಗೊಳಿಸುವಂತೆ ಅವರು ನಗರಸಭೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X