Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಸ್ವಾತಂತ್ರ್ಯ ದಿನಾಚರಣೆ...

ಉಡುಪಿ: ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಪೂರ್ವಭಾವಿ ಸಭೆ

ವಾರ್ತಾಭಾರತಿವಾರ್ತಾಭಾರತಿ7 Aug 2026 8:19 PM IST
share
ಉಡುಪಿ: ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಪೂರ್ವಭಾವಿ ಸಭೆ

ಉಡುಪಿ, ಆ.7: ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ವನ್ನು ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಅರ್ಥ ಪೂರ್ಣ ಹಾಗೂ ಸಂಭ್ರಮ - ಸಡಗರದಿಂದ ಆಚರಿಸಲು ಅಗತ್ಯವಿರುವ ಸಕಲ ಸಿದ್ಧತೆ ಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಸ್ವಾತ್ರಂತ್ರ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಆಗಸ್ಟ್ 15 ರಂದು ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಸಚಿವರು ಅಂದು ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿ, ನಂತರ ಸ್ವಾತಂತ್ರ್ಯೋತ್ಸವ ಸಂದೇಶ ನೀಡಲಿದ್ದಾರೆ ಎಂದರು.

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪೊಲೀಸ್, ನಕ್ಸಲ್ ನಿಗ್ರಹ ಪಡೆ, ಕರಾವಳಿ ಕಾವಲು ಪೊಲೀಸ್, ಅಗ್ನಿಶಾಮಕ, ಅರಣ್ಯ, ಗೃಹ ರಕ್ಷಕದಳ, ಎನ್‌ಸಿಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ವಿವಧ ಶಾಲಾ-ಕಾಲೇಜು ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಲಿದ್ದು, ಪಥಸಂಚಲನಕ್ಕೆ ಸಂಬಂಧಿಸಿದಂತೆ ಅಗತ್ಯ ಪೂರ್ವ ತಯಾರಿ ಮಾಡಿಕೊಳ್ಳುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ಸ್ವಚ್ಛತೆ, ಪರಿಸರ ಸಂರಕ್ಷಣೆ, ಸ್ವಾಸ್ಥ್ಯ ಉಡುಪಿ, ಪ್ರವಾಸೋದ್ಯಮ ಕುರಿತು ಸಂದೇಶ ಸಾರುವ ವೈಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳಿಂದ ಗಣ್ಯರನ್ನು ಸನ್ಮಾನಿಸಲಾಗುವುದು. ಅಲ್ಲದೆ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ಸಹ ವಿತರಿಸಲಾಗುವುದು ಎಂದ ಅವರು, ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ಜನಪ್ರತಿನಿಧಿಗಳಿಗೆ, ಗಣ್ಯವ್ಯಕ್ತಿಗಳಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ಅವರ ಕುಟಂಬದವರಿಗೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದರು.

ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದ ಅವರು, ಕ್ರೀಡಾಂಗಣದಲ್ಲಿ ತುರ್ತು ಆರೋಗ್ಯ ಸೇವೆಗೆ ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ಕೈಗೊಳ್ಳುವಂತೆ ಸೂಚನೆ ನೀಡಿದರು.

ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಚರಿಸಲು ವಿವಿಧ ಉಪ ಸಮಿತಿ ಗಳನ್ನು ರಚಿಸಿ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಕಾರ್ಯಭಾರ ಹಂಚಿಕೆ ಮಾಡಲಾಯಿತು. ಉಪಸಮಿತಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ಹಾಗೂ ಅಚ್ಚುಕಟ್ಟಾಗಿ ಮಾಡುವಂತೆ ಸೂಚನೆ ನೀಡಿರು.

ಸಭೆಯಲ್ಲಿ ಪೌರಾಯುಕ್ತ ಮಹಾಂತೇಶ ಹಂಗರಗಿ, ಡಿಹೆಚ್‌ಓ ಡಾ. ಬಸವರಾಜ್ ಹುಬ್ಬಳ್ಳಿ, ವಾರ್ತಾಧಿಕಾರಿ ಮಂಜುನಾಥ್ ಬಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮ್‌ರಾವ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X