ರೈಲ್ವೆ ಹಳಿ ಬಳಿ ಅಪರಿಚಿತನ ಮೃತದೇಹ ಪತ್ತೆ

ಉಡುಪಿ, ಆ.7: ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊರಂಗ್ರಪಾಡಿ ರೈಲುಹಳಿ ಪಕ್ಕದ ಮಳೆನೀರು ಹರಿಯುವ ಕಾಲುವೆಯಲ್ಲಿ ಪತ್ತೆಯಾಗಿರುವ ಘಟನೆ ಶುಕ್ರವಾರ ನಡೆದಿದೆ.
ಈ ವ್ಯಕ್ತಿ ಚಲಿಸುತ್ತಿರುವ ರೈಲಿನಿಂದ ಆಯಾತಪ್ಪಿ ಬಿದ್ದು ಅಥವಾ ಜಿಗಿದು ಸಾವನಪ್ಪಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯ ತಲೆಭಾಗಕ್ಕೆ ಗಂಭೀರ ಗಾಯವಾಗಿರುವುದು ಕಂಡುಬಂದಿದೆ. ಹಳಿ ತಪಾಸಣೆ ಗಸ್ತು ಸಿಬ್ಬಂದಿಗೆ ಗಸ್ತು ಕರ್ತವ್ಯದಲ್ಲಿದ್ದಾಗ ಮೃತದೇಹ ಕಂಡುಬಂದಿದ್ದು, ತಕ್ಷಣ ಅವರು ರೈಲ್ವೆ ಆರ್‌ಪಿಎಫ್‌ಗೆ ಮಾಹಿತಿ ನೀಡಿದ್ದಾರೆ.
ಸಮಾಜಸೇವಕ ನಿತ್ಯಾನಂದ ಒಳಕಾಡು ಕಳೇಬರವನ್ನು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲು ಇಲಾಖೆಗೆ ನೆರವಾದರು. ಮೃತ ವ್ಯಕ್ತಿಗೆ 35 ವರ್ಷ ಅಂದಾಜಿಸಲಾಗಿದೆ. ಹೆಸರು ವಿಳಾಸ ತಿಳಿದುಬಂದಿಲ್ಲ. ಈ ಬಗ್ಗೆ ಉಡುಪಿ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




