ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್‌ಗೆ ಶೃದ್ಧಾಂಜಲಿ ಸಭೆ

ಉಡುಪಿ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಅತ್ಯಂತ ಕಡಿಮೆ ಅವಧಿಯಲ್ಲಿ ಸಕ್ರಿಯವಾಗಿ ಜಿಲ್ಲೆಯಾದ್ಯಂತ ಸಂಘಟನೆಯನ್ನು ಬಲಪಡಿಸಿದ ಶ್ರಮಜೀವಿ ಲಕ್ಷ್ಮೀ ಮಂಜುನಾಥ್ ಹಠಾತ್ ಅಗಲು ವಿಕೆ ತೀವ್ರ ಆಘಾತ ತಂದಿದೆ. ಉಡುಪಿ ನಗರಸಭೆಯ ಉಪಾಧ್ಯಕ್ಷೆಯಾಗಿ ಸಾರ್ಥಕ ಸೇವೆ ಸಲ್ಲಿಸಿರುವ ಅವರು ಪಕ್ಷದ ಪ್ರತಿಯೊಂದು ಚಟುವಟಿಕೆಗಳಲ್ಲಿಯೂ ಉತ್ಸಾಹದಿಂದ ಭಾಗವಹಿಸುತ್ತಿ ದ್ದರು. ಅವರ ಕರ್ತವ್ಯ ನಿಷ್ಠೆ ಮತ್ತು ಕಾರ್ಯ ಬದ್ಧತೆ ಅನುಕರಣೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದ್ದಾರೆ.
ಉಡುಪಿ ಜಿಲ್ಲಾ ಬಿಜೆಪಿ ಹಾಗೂ ಉಡುಪಿ ನಗರ ಬಿಜೆಪಿ ವತಿಯಿಂದ ಲಕ್ಷ್ಮೀ ಮಂಜುನಾಥ್ ಕೊಳ ಸ್ಮರಣಾರ್ಥ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಶೃದ್ಧಾಂಜಲಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ನುಡಿ ನಮನ ಸಲ್ಲಿಸಿದರು.
ಉಡುಪಿ ಶಾಸಕ ಯಶ್ಪಾಲ್ ಎ.ಸುವರ್ಣ, ಬಿಜೆಪಿ ಉಡುಪಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ದಿನಕರ ಶೆಟ್ಟಿ ಹೆರ್ಗ, ಮಾಜಿ ನಗರಸಭಾ ಸದಸ್ಯರಾದ ಗಿರೀಶ್ ಎಂ. ಅಂಚನ್, ವಿಜಯ ಕೊಡವೂರು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ನುಡಿ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಮುಖಂಡರಾದ ಕಿರಣ್ ಕುಮಾರ್ ಬೈಲೂರು, ಜ್ಯೋತಿ ಉದಯ ಪೂಜಾರಿ, ನಳಿನಿ ಪ್ರದೀಪ್ ರಾವ್, ಶ್ರೀಕಾಂತ್ ನಾಯಕ್, ಶಿಲ್ಪಾ ಜಿ. ಸುವರ್ಣ, ದಿನಕರ ಬಾಬು, ಉಷಾ ಪ್ರಕಾಶ್ ಶೆಟ್ಟಿ, ದಿನೇಶ್ ಅಮೀನ್, ರವಿ ಅಮೀನ್, ಸತ್ಯಾನಂದ ನಾಯಕ್, ಶ್ರೀನಿಧಿ ಹೆಗ್ಡೆ, ಶಿವಕುಮಾರ್ ಅಂಬಲಪಾಡಿ, ಪ್ರಿಯದರ್ಶಿನಿ ದೇವಾಡಿಗ ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.






