ಕಾರು ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು

ಶಿರ್ವ, ಆ.8: ಕಾರೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಆ.7ರಂದು ಸಂಜೆ 7ಗಂಟೆ ಸುಮಾರಿಗೆ ಶಿರ್ವ ಇಂಡಿಯನ್ ಪೆಟ್ರೋಲ್ ಬಂಕ್ ಎದುರುಗಡೆ ನಡೆದಿದೆ.
ಮೃತರನ್ನು ಪ್ರಕಾಶ್ ಆಚಾರ್ಯ(55) ಎಂದು ಗುರುತಿಸಲಾಗಿದೆ. ಶಿರ್ವ ಕಡೆಯಿಂದ ಬೆಳ್ಮಣ್ ಕಡೆಗೆ ಹೋಗುತ್ತಿದ್ದ ಸ್ಕೂಟರ್‌ಗೆ ಎದುರಿನಿಂದ ಬಂದ ಕಾರು, ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಸವಾರ ಪ್ರಕಾಶ್ ಆಚಾರ್ಯ ಸ್ಕೂಟರ್ ಸಮೇತ ರಸ್ತೆಗೆ ಬಿದ್ದರು. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




