Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅತ್ತೂರು ಬಾಸಿಲಿಕಾ ಸಮರ್ಪಣೆಯ...

ಅತ್ತೂರು ಬಾಸಿಲಿಕಾ ಸಮರ್ಪಣೆಯ ದಶಮಾನೋತ್ಸವದ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ10 Aug 2026 6:34 PM IST
share
ಅತ್ತೂರು ಬಾಸಿಲಿಕಾ ಸಮರ್ಪಣೆಯ ದಶಮಾನೋತ್ಸವದ ಸಂಭ್ರಮ

ಕಾರ್ಕಳ: ನಾವು ನಮ್ಮ ಜೀವನದಲ್ಲಿ ಸಾಧ್ಯವಾದಷ್ಟು ಬಡವರ ನಿರ್ಗತಿಕರ ಹಾಗೂ ತುಳಿತಕ್ಕೆ ಒಳಪಟ್ಟ ಕಷ್ಟಕಾ ರ್ಪಣ್ಯಗಳನ್ನು ಅರಿತುಕೊಂಡು ಅವರ ಬಾಳಿನಲ್ಲಿ ಸಂತೋಷವನ್ನು ತರಲು ಕಾರಣವಾದಾಗ ನಮ್ಮ ಜೀವನವು ಸಾರ್ಥಕವಾಗುತ್ತದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾದ್ಯಕ್ಷ ಅತಿ ವಂ.ಡಾ.ಲೆಸ್ಲಿ ಕ್ಲಿಫರ್ಡ್ ಡಿಸೋಜ ಹೇಳಿದ್ದಾರೆ.

ಕಾರ್ಕಳದ ಸಂತ ಲಾರೆನ್ಸರ ಬಾಸಿಲಿಕದ ಸಮರ್ಪಣೆಯ ದಶಮಾನೋತ್ಸವ ಹಾಗೂ ಪಾಲಕ ಸಂತರ ಹಬ್ಬದ ಪ್ರಯುಕ್ತ ಬಲಿಪೂಜೆಯಲ್ಲಿ ಪಾಲ್ಗೊಂಡು ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡುತ್ತಿದ್ದರು.

ಧರ್ಮಸಭೆಯ ಸಂಪತ್ತನ್ನು ಬಡವರಿಗೆ ಹಾಗೂ ನಿರ್ಗತಕರಿಗೆ ಹಂಚಿದ ಸಂತ ಲಾರೆನ್ಸರು ನಮಗೆಲ್ಲರಿಗೂ ಆದರ್ಶಪ್ರಾಯರು. ಅವರು ಬೋಧಿಸಿದ ಹಾಗೂ ಜೀವಿಸಿದ ತತ್ವಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಉಡುಪಿ ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷ ಅತಿ ವಂ.ಡಾ. ಜೆರಾಲ್ಡ್ ಐಸಾಕ್ ಲೋಬೊ ಬಲಿಪೂಜೆಯಲ್ಲಿ ಪ್ರವಚನವನ್ನು ನೀಡಿದರು. ಉಡುಪಿ ಧರ್ಮ ಪ್ರಾಂತ್ಯದ ವಿಕಾರ್ ಜನರಲ್ ಮೊ.ಫ್ರಾನ್ಸಿಸ್ ಲುವಿಸ್, ಧರ್ಮ ಪ್ರಾಂತ್ಯದ ಚಾನ್ಸಲರ್ ವಂ.ಸ್ಟೀವನ್ ಡಿಸೋಜ, ಅನೇಕ ಧರ್ಮ ಗುರುಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡಿದ್ದರು.

ಆರಂಭದಲ್ಲಿ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರನ್ನು ಬಾಸಿಲಿಕದ ಪ್ರಧಾನ ಪ್ರವೇಶ ದ್ವಾರದ ಬಳಿ ಅದ್ದೂರಿ ಯಾಗಿ ಸ್ವಾಗತಿಸಲಾಯಿತು. ಇದರ ನಂತರ ಕ್ರಿಸ್ತ ಕೃಪ ಕಟ್ಟಡದ ಆಶೀರ್ವಚನ ಹಾಗೂ ನೂತನವಾಗಿ ನಿರ್ಮಿಸಲಾಗುತ್ತಿರುವ ಬಲಿಪೀಠದ ಶಂಕುಸ್ಥಾಪನೆಯನ್ನು ಧರ್ಮಾಧ್ಯಕ್ಷರ ನೇತೃತ್ವದಲ್ಲಿ ನಡೆಸಲಾಯಿತು.

ಬಲಿಪೂಜೆಯ ನಂತರ ನಡೆದ ದಶಮಾನೋತ್ಸವದ ಆಚರಣೆಯಲ್ಲಿ ಕ್ರಿಸ್ತಕೃಪ ಕಟ್ಟಡದ ರಚನೆಯಲ್ಲಿ ಶ್ರಮವಹಿಸಿದ ಹಾಗೂ ಬಾಸಿಲಿಕದಲ್ಲಿ ನಿರ್ದೇಶಕರಾಗಿ ಸೇವೆಯನ್ನು ಸಲ್ಲಿಸಿರುವ ವಂ.ಅಲ್ಬನ್ ಡಿಸೋಜ, ವಂ. ಜಾರ್ಜ್ ಡಿಸೋಜ ಹಾಗೂ ವಂ.ರೋಮನ್ ಮಸ್ಕರೇನಸ್ ಹಾಗೂ ನಿವೃತ್ತ ಮತ್ತು ಹಾಲಿ ಧರ್ಮಧ್ಯಕ್ಷರನ್ನು ಬಾಸಿಲಿಕದ ಪರವಾಗಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಅತಿ ವಂ. ಮೊನ್ಸಿಂಜರ್ ಫ್ರಾನ್ಸಿಸ್ ಲುವಿಸ್, ಪಾಲನಾ ಆಯೋಗಗಳ ಸಂಯೋಜಕ ರೀಟಾ ಲೋಬೊ ಉಪಸ್ಥಿತರಿದ್ದರು.

ಬಾಸಿಲಿಕದ ನಿರ್ದೇಶಕ ವಂ.ಆಲ್ಬನ್ ಡಿಸೋಜ ಸ್ವಾಗತಿಸಿದರು. ಪಾಲನಾ ಮಂಡಳಿಯ ಕಾರ್ಯದರ್ಶಿ ಮೆಲ್ವಿನ್ ಕ್ಯಾಸ್ತಲಿನೊ ದಶಮಾನೋತ್ಸವ ವರದಿಯನ್ನು ವಾಚಿಸಿದರು. ಪಾಲನಾ ಮಂಡಳಿಯ ಉಪಾಧ್ಯಕ್ಷ ವಂದೀಶ್ ಮಥಾಯಸ್ ವಂದಿಸಿದರು. ವಿಲ್ಸನ್ ಟೆಲ್ಲಿಸ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X