ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ

ಕಾರ್ಕಳ, ಆ.10: ವಿಪರೀತ ಮದ್ಯಪಾನ ಮಾಡುವ ಚಟದಿಂದ ಮನನೊಂದ ಮಾಳ ಗ್ರಾಮದ ನವೀನ(42) ಎಂಬವರು ಆ.9ರಂದು ಮಧ್ಯಾಹ್ನ ಮನೆಯ ಬಳಿಯ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅನಾರೋಗ್ಯದಿಂದ ಮನನೊಂದ ಮೊಂಟ ಮೂಲ್ಯ(81) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಆ.9ರಂದು ರಾತ್ರಿ ಮನೆಯ ಅಂಗಳದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




