Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎಸ್‌ಐಆರ್: ಉಡುಪಿ ಜಿಲ್ಲೆಯಲ್ಲಿ ಹೆಸರು...

ಎಸ್‌ಐಆರ್: ಉಡುಪಿ ಜಿಲ್ಲೆಯಲ್ಲಿ ಹೆಸರು ತೆಗೆಯಲ್ಪಟ್ಟವರ ಸಂಖ್ಯೆಯಲ್ಲಿ ಇಳಿಕೆ

ವಾರ್ತಾಭಾರತಿವಾರ್ತಾಭಾರತಿ10 Aug 2026 9:34 PM IST
share
ಎಸ್‌ಐಆರ್: ಉಡುಪಿ ಜಿಲ್ಲೆಯಲ್ಲಿ ಹೆಸರು ತೆಗೆಯಲ್ಪಟ್ಟವರ ಸಂಖ್ಯೆಯಲ್ಲಿ ಇಳಿಕೆ

ಉಡುಪಿ, ಆ.10: ಜಿಲ್ಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಮುಂದುವರಿ ದಿದ್ದು, ವಿವಿಧ ಕಾರಣಗಳಿಂದ ಮತದಾರರ ಪಟ್ಟಿಯಿಂದ ಹೊರಬಿದ್ದವರು ದಾಖಲೆಗಳನ್ನು ತಂದು ಹೆಸರನ್ನು ಮತ್ತೆ ಸೇರ್ಪಡೆಗೊಳಿಸುವ ಕಾರ್ಯ ನಡೆಯುತ್ತಿದೆ.

ಬಿಎಲ್‌ಒಗಳು ಜಿಲ್ಲೆಯ ಮತದಾರರಿಗೆ ತಲುಪಿಸಿದ್ದ 10,63,876 ಎನ್ಯೂಮರೇಶನ್ ನಮೂನೆ (ಗಣತಿ ನಮೂನೆ) ಗಳನ್ನು ಮರಳಿ ಪಡೆದು ಅದನ್ನು ಶೇ.100ರಷ್ಟು ಡಿಜಟಲೀಕರಣಗೊಳಿಸುವಾಗ 9,99,675 (ಶೇ. 93.97) ರಷ್ಟು ನಮೂನೆಗಳು ಮಾತ್ರ ಡಿಜಿಟಲೈಸ್ ಮಾಡಲಾಗಿತ್ತು. ಉಳಿದ 64,201 ನಮೂನೆಗಳು ವಿವಿಧ ಕಾರಣಗಳಿಂದ (ಎಎಸ್‌ಡಿಡಿಒ) ಪಟ್ಟಿ ಯಿಂದ ಅನರ್ಹಗೊಂಡಿದ್ದವು.

ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದವರು ಇದೀಗ ವಿವಿದ ದಾಖಲೆಗಳೊಂದಿಗೆ ಅಧಿಕಾರಿಗಳನ್ನು ಬೇಟಿಯಾಗಿ ತಮ್ಮ ದಾಖಲೆಗಳನ್ನು ತೋರಿಸಿ ಮತ್ತೆ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳುತಿದ್ದಾರೆ.

ಈ ಪ್ರಕ್ರಿಯೆಯ ಮೂಲಕ ಅ.10 ಸೋಮವಾರ ಸಂಜೆಯವರೆಗೆ ಡಿಜಿಟಲೈಸ್ ಆದವರ ಸಂಖ್ಯೆ ಇದೀಗ 10,00,260ಕ್ಕೇರಿದೆ. ಅದೇ ರೀತಿ ವಿವಿಧ ಕಾರಣಗಳಿಂದ ಪಟ್ಟಿಯಿಂದ ಹೊರಬಿದ್ದವರ ಸಂಖ್ಯೆ 63,616ಕ್ಕೆ ಇಳಿದಿದೆ. ಈ ಮೂಲಕ ಮೊದಲ ಪಟ್ಟಿಯಿಂದ ಕೈಬಿಡಲಾದ 585 ಮಂದಿಯ ಹೆಸರನ್ನು ಮತ್ತೆ ಪಟ್ಟಿಗೆ ಸೇರಿಸಲಾಗಿದೆ.

ಸದ್ಯ ಜಿಲ್ಲೆಯಲ್ಲಿ 21,215ಮಂದಿ ಮೃತಪಟ್ಟಿದ್ದರೆ, 29,532 ಮಂದಿ ಶಾಶ್ವತವಾಗಿ ಬೇರೆ ಕಡೆಗೆ ವರ್ಗಾವಣೆ ಗೊಂಡಿದ್ದಾರೆ. 4360 ಮಂದಿ ಗೈರಾಗಿದ್ದರೆ, 192 ಮಂದಿ ಇತರರೂ ಈ ಪಟ್ಟಿಯಲ್ಲಿದ್ದಾರೆ. ಗಣತಿ ನಮೂನೆಗಳನ್ನು ಭರ್ತಿ ಮಾಡಿ ಬಿಎಲ್‌ಒಗಳಿಗೆ ತಲುಪಿಸುವ ದಿನಾಂಕವನ್ನು ಆ.17ವರೆಗೆ ವಿಸ್ತರಿಸಲಾಗಿದೆ. ನಮೂನೆ ತುಂಬಿಸಲು ಯಾವುದೇ ತೊಂದರೆ ಅಥವಾ ಗೊಂದಲಗಳಿದ್ದರೆ, ನಿಮ್ಮ ಬಿಎಲ್‌ಒರನ್ನು ಸಂಪರ್ಕಿಸಬಹುದು.

ಬೂತ್ ಮಟ್ಟದಲ್ಲಿ ಮತದಾರರ ಪಟ್ಟಿಯಿಂದ ಕೈಬಿಡಲಾದವರ ಹೆಸರು ಗಳನ್ನು ಜಿಲ್ಲೆಯ ಎಎಸ್‌ಡಿಡಿಒ ಪಟ್ಟಿಯಲ್ಲಿ ಅಧಿಕೃತ ವೆಬ್‌ಸೈಟ್- https://udupi.nic.in/en/special-intensive-revision -2026-ನಲ್ಲಿ ಪ್ರಕಟಿಸ ಲಾಗಿದೆ. ಕೂಡಲೇ ಎಲ್ಲರೂ ಎಎಸ್‌ಡಿಡಿಒ ಪಟ್ಟಿಯನ್ನು ವೀಕ್ಷಿಸಿ ಏನಾದರೂ ಬದಲಾವಣೆಗಳು ಅಥವಾ ತಿದ್ದುಪಡಿಗಳು ಇದ್ದಲ್ಲಿ ಸಂಬಂಧಪಟ್ಟ ಬೂತ್ ಮಟ್ಟದ ಅಧಿಕಾರಿಗಳಿಗೆ ಹಾಗೂ ಮತದಾರರ ನೋಂದಣಾಧಿಕಾರಿಯವರ ಗಮನಕ್ಕೆ ಆಗಸ್ಟ್ 17ರ ಒಳಗೆ ತರಬಹುದಾಗಿದೆ.

ಎನ್ಯೂಮರೇಷನ್ ನಮೂನೆಗಳನ್ನು ಮನೆಮನೆಗೆ ತೆರಳಿ ಸಂಗ್ರಹಿಸುವ ಪ್ರಕ್ರಿಯೆಯು ಆಗಸ್ಟ್ 17ರವರೆಗೆ ನಡೆಯಲಿದೆ. ಆ.24ರಂದು ಕರಡು ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X