Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ತುಳುನಾಡಿನ ಸಂಸ್ಕೃತಿ, ಸಂಪ್ರದಾಯ,...

ತುಳುನಾಡಿನ ಸಂಸ್ಕೃತಿ, ಸಂಪ್ರದಾಯ, ಆರಾಧನೆಯನ್ನು ಉಳಿಸೋಣ: ವಿನಯಕುಮಾರ್ ಸೊರಕೆ

ವಾರ್ತಾಭಾರತಿವಾರ್ತಾಭಾರತಿ10 Aug 2026 10:04 PM IST
share
ತುಳುನಾಡಿನ ಸಂಸ್ಕೃತಿ, ಸಂಪ್ರದಾಯ, ಆರಾಧನೆಯನ್ನು ಉಳಿಸೋಣ: ವಿನಯಕುಮಾರ್ ಸೊರಕೆ
ಆಟಿಡೊಂಜಿ ದಿನ ಕಾರ್ಯಕ್ರಮ

ಉಡುಪಿ, ಆ.10: ತುಳುನಾಡಿನ ಸಂಸ್ಕೃತಿ, ಸಂಪ್ರದಾಯ, ಭಾಷೆ, ಆರಾಧನೆ, ಆಹಾರ ಪದ್ಧತಿಗಳೆಲ್ಲವೂ ಉತ್ಕೃಷ್ಟ ವಾಗಿವೆ. ಅವುಗಳನ್ನು ಮುಂದೆಯೂ ಉಳಿಸಿ, ಬೆಳೆಸಿಕೊಂಡು ಹೋಗುವ ಹಾಗೂ ಅದನ್ನು ಮುಂದಿನ ಪೀಳಿಗೆಗೆ ದಾಟಿಸುವ ಕಾರ್ಯವನ್ನು ಇಂದಿನವರು ಮಾಡಬೇಕಾಗಿದೆ ಎಂದು ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ್ ವಿನಯಕುಮಾರ್ ಸೊರಕೆ ಹೇಳಿದ್ದಾರೆ.

ಸೋಮವಾರ ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭನವದಲ್ಲಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಯಿಂದ ಆಯೋಜಿಸಲಾದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ತುಳುನಾಡಿನಲ್ಲಿ ಬಾಳಿ ಬದುಕಿದ ಹಿರಿಯರು ಪ್ರಕೃತಿಯಲ್ಲಿ ದೊರೆಯುವ ಮರಗಿಡ, ಬಳ್ಳಿ, ಗೆಡ್ಡೆ ಮುಂತಾದವು ಗಳನ್ನು ಆಹಾರ, ಔಷಧಿಯಾಗಿ ಬಳಸಿಕೊಂಡು ಆಟಿ ತಿಂಗಳ ಕಷ್ಟದ ದಿನಗಳಲ್ಲಿ ರೋಗರುಜಿನ ಬಾಧಿಸದಂತೆ ಬದುಕಿದ್ದರು. ಇಲ್ಲಿನ ಎಲ್ಲಾ ಹಬ್ಬಗಳಿಗೆ ಕೃಷಿ ಮೂಲವಾಗಿದ್ದು, ಅದಕ್ಕೆ ಸಂಬಂಧಿಸಿದಂತೆ ತುಳುನಾಡಿನಲ್ಲಿ ಆಟಿ ಆಚರಣೆ ಬೆಳೆದು ಬಂದಿದೆ ಎಂದು ಅವರು ಹೇಳಿದರು.

ಆಟಿ ತಿಂಗಳು ತುಳುವರಲ್ಲಿ ಬಹಳ ಸಂಕಷ್ಟದ ಸಮಯವಾಗಿತ್ತು. ಎಡೆಬಿಡದೆ ಸುರಿಯುವ ಮಳೆ, ಬೇಸಾಯ ಕೆಲಸ ಆಯಾಸ, ರೋಗರುಜಿನಗಳ ಪ್ರಸಾರ, ಆಹಾರದ ಕೊರತೆ ಬಹಳವಿತ್ತು. ಈ ಸಂದರ್ಭ ಹಿರಿಯರು ಪ್ರಕೃತಿದತ್ತವಾಗಿ ಸಿಗುತ್ತಿದ್ದ ಗಡ್ಡೆಗೆಣಸು, ಹಲಸು, ಸೊಪ್ಪು, ತರಕಾರಿಗಳನ್ನು ತಿಂದು ತಮ್ಮ ಆರೋಗ್ಯ ಕಾಪಾಡಿಕೊಂಡಿದ್ದರು. ಇಂದಿನ ಯುವ ಸಮುದಾಯಕ್ಕೆ ಇದರ ಪರಿಚಯವನ್ನು ಮಾಡುವ ಅಗತ್ಯವಿದೆ ಎಂದರು.

ಕಾರ್ಯಕ್ರಮದಲ್ಲಿ ಹಿರಿಯಡ್ಕ ಕಾಲೇಜಿನ ಉಪನ್ಯಾಸಕಿ ಶಾಲಿನಿ ಆಟಿ ಆಚರಣೆ ಕುರಿತು ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್, ನಾಯಕರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ನಮಿತಾ ರಾವ್, ಹರೀಶ್ ಕಿಣಿ, ಸರಸು ಡಿ ಬಂಗೇರಾ, ನಿರೀಕ್ಷಾ ಮೆಂಡನ್ ಮತ್ತು ಇತರರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ತುಳುನಾಡಿನ ವಿವಿಧ ಬಗೆಯ ಆಟಿ ಖಾದ್ಯಗಳನ್ನು ಸಭಿಕರಿಗೆ ಉಣ ಬಡಿಸಲಾಯಿತು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X