ಮರವಂತೆ: ಕರ್ಕಾಟಕ ಅಮಾವಾಸ್ಯೆ ಜಾತ್ರೆ

ಕುಂದಾಪುರ : ಮರವಂತೆಯ ನದಿ-ಕಡಲು ನಡುವಿನ, ಹೆದ್ದಾರಿ ಅಂಚಿನ ಮಾರಸ್ವಾಮಿಯ ಮಹಾರಾಜಸ್ವಾಮಿ ಶ್ರೀವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಬುಧವಾರ ಸಂಪನ್ನಗೊಂಡಿತು.
ಬೆಳಗಿನಿಂದಲೇ ಜಿಲ್ಲೆಯ ವಿವಿಧೆಡೆಗಳಿಂದ ಭಕ್ತರ ಮಹಾಪೂರವೇ ಹರಿದು ಬಂದಿತು. ಕೆಲವರು ಸಮುದ್ರ ಮತ್ತು ನದಿಗಳಲ್ಲಿ ಪವಿತ್ರ ಸ್ನಾನ ಮಾಡಿ ಶ್ರೀದೇವರ ದರ್ಶನ ಪಡೆದು ಅಭಿಷೇಕ, ಪೂಜೆ, ಅರ್ಪಣೆ ಸಲ್ಲಿಸಿದರು. ಸಹಸ್ರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಜೇಶ ಹೆಬ್ಬಾರ್ ಹಾಗೂ ಸದಸ್ಯರು, ದೇವಸ್ಥಾನದ ಅರ್ಚಕರು, ಉಪಾದಿವಂತರು ಉಪಸ್ಥಿತರಿದ್ದರು. ಕುಂದಾಪುರ ಡಿವೈಎಸ್ಪಿ ಎಚ್.ಡಿ.ಕುಲಕರ್ಣಿ, ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಶಿವಕುರ್ಮಾ ಮಾರ್ಗದರ್ಶನದಂತೆ ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಪವನ್ ನಾಯಕ್ ಹಾಗೂ ವಿವಿಧ ಪೊಲೀಸ್ ಠಾಣೆಗಳ ಉಪನಿರೀಕ್ಷರು ಹಾಗೂ ಸಿಬ್ಬಂದಿಗಳು ಬಂದೋಬಸ್ತ್ ಮಾಡಿದ್ದರು.
Next Story




