Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೈಂದೂರು: ಗಾಳಿ-ಮಳೆಗೆ ವಾಸ್ತವ್ಯದ ಮನೆ...

ಬೈಂದೂರು: ಗಾಳಿ-ಮಳೆಗೆ ವಾಸ್ತವ್ಯದ ಮನೆ ಸಂಪೂರ್ಣ ಹಾನಿ

ವಾರ್ತಾಭಾರತಿವಾರ್ತಾಭಾರತಿ13 Aug 2026 7:27 PM IST
share
ಬೈಂದೂರು: ಗಾಳಿ-ಮಳೆಗೆ ವಾಸ್ತವ್ಯದ ಮನೆ ಸಂಪೂರ್ಣ ಹಾನಿ

ಉಡುಪಿ, ಆ.13: ಉಡುಪಿ ಜಿಲ್ಲೆಯಲ್ಲಿ ಆಗಾಗ ಸುರಿಯುವ ಮಳೆಗೆ ಬೈಂದೂರು ತಾಲೂಕು ನಾವುಂದ ಗ್ರಾಮದಲ್ಲಿ ವಾಸ್ತವ್ಯದ ಮನೆಯೊಂದು ಸಂಪೂರ್ಣ ಹಾನಿಗೊಂಡಿದೆ ಎಂದು ತಿಳಿದುಬಂದಿದೆ.

ನಾವುಂದದ ಸದಾಶಿವ ಗಾಣಿಗ ಎಂಬವರ ವಾಸದ ಮನೆ ಗಾಳಿ-ಮಳೆಗೆ ಸಂಪೂರ್ಣ ಹಾನಿಗೊಂಡಿದ್ದು, ಏಳು ಲಕ್ಷ ರೂ.ಗಳಿಗೂ ಅಧಿಕ ನಷ್ಟ ಉಂಟಾಗಿರುವುದಾಗಿ ಅಂದಾಜಿಸಲಾಗಿದೆ.

ಜಿಲ್ಲೆಯಲ್ಲಿ 33.9ಮಿ.ಮೀ.ಮಳೆ: ಉಡುಪಿ ಜಿಲ್ಲೆಯಲ್ಲಿ ಇಂದು ಸರಾಸರಿ 33.9 ಮಿ.ಮೀ. ಮಳೆಯಾಗಿದೆ. ಹೆಬ್ರಿಯಲ್ಲಿ 41.4ಮಿ.ಮೀ, ಕುಂದಾಪುರದಲ್ಲಿ 38,6, ಬೈಂದೂರಿನಲ್ಲಿ 36.6, ಕಾರ್ಕಳದಲ್ಲಿ 31.7, ಉಡುಪಿಯಲ್ಲಿ 32.0, ಬ್ರಹ್ಮಾವರದಲ್ಲಿ 23.8 ಹಾಗೂ ಕಾಪುವಿನಲ್ಲಿ 20.3ಮಿ.ಮೀ. ಮಳೆಯಾಗಿದೆ.

ಉಡುಪಿ ಜಿಲ್ಲೆಯಲ್ಲಿ ದಿನದ ಅತ್ಯಧಿಕ ಮಳೆ ಬಿದ್ದಿರುವುದು ಕುಂದಾಪುರದ ಹೆಂಗವಳ್ಳಿಯಲ್ಲಿ. ಇಲ್ಲಿ 62.5ಮಿ.ಮೀ. ಮಳೆಯಾಗಿದೆ. ರಾಜ್ಯದಲ್ಲೇ ಅತ್ಯಧಿಕ ಮಳೆ ಬಿದ್ದಿರುವುದು ಉತ್ತರ ಕನ್ನಡ ಜಿಲ್ಲೆ ಸಿದ್ಧಾಪುರ ತಾಲೂಕಿನ ನಿಲ್ಕುಂಡದಲಿಲ ಇಲ್ಲಿ 88.5ಮಿ.ಮೀ. ಮಳೆ ಸುರಿದಿದೆ. ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಶಿರ್ತಾಡಿಯಲ್ಲಿ 61ಮಿ.ಮೀ. ಮಳೆ ಬಿದ್ದಿದೆ.

ಅಧಿಕ ಮಳೆ: ಆಗಸ್ಟ್ ಒಂದರಿಂದ ಉಡುಪಿ ಜಿಲ್ಲೆಯಲ್ಲಿ ಮಳೆ ಚೆನ್ನಾಗಿ ಬಂದಿರುವುದರಿಂದ ಆ.1ರಿಂದ 13ರವರೆಗೆ ಬಿದ್ದಿರುವ ಮಳೆಯಿಂದ ಜಿಲ್ಲೆಯಲ್ಲಿ ಶೇ.7ರಷ್ಟು ಅಧಿಕ ಮಳೆ ದಾಖಲಾಗಿದೆ. ಈ ಅವಧಿಯಲ್ಲಿ ಜಿಲ್ಲೆಯ ವಾಡಿಕೆ ಮಳೆ 533ಮಿ.ಮೀ. ಆಗಿದ್ದರೆ ಈ ಬಾರಿ ಕಳೆದ 13 ದಿನಗಳಲ್ಲಿ 568ಮಿ.ಮೀ. ಮಳೆ ಬಿದ್ದಿದೆ ಎಂದು ರಾಜ್ಯದ ವಿಕೋಪ ನಿಯಂತ್ರಣ ಕೇಂದ್ರದ ಮಾಹಿತಿ ತಿಳಿಸಿದೆ.

ಉಡುಪಿ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಶೇ.50ರಷ್ಟು ಮಳೆ ಕೊರತೆ ಕಾಣಿಸಿಕೊಂಡಿದ್ದರೆ, ಜುಲೈ ತಿಂಗಳಲ್ಲಿ ಶೇ.27ರಷ್ಟು ಮಳೆ ಕೊರತೆ ಇತ್ತು. ಮುಂಗಾರು ಮಳೆಗಾಲದ ಅವಧಿಯಲ್ಲಿ (ಜೂ.1ರಿಂದ ಆಗಸ್ಟ್‌13ರವರೆಗೆ) ಉಡುಪಿ ಜಿಲ್ಲೆಯಲ್ಲಿ ಶೇ.29ರಷ್ಟು ಮಳೆ ಕೊರತೆ ಉಳಿದುಕೊಂಡಿದೆ. ಈ ಅವಧಿಯಲ್ಲಿ ಜಿಲ್ಲೆಯ ವಾಡಿಕೆ ಮಳೆ 3087ಮಿ.ಮೀ. ಆಗಿದ್ದರೆ, ಈ ಬಾರಿ ಬಿದ್ದಿರುವುದು 2184 ಮಿ.ಮೀ. ಮಳೆ ಮಾತ್ರ ಎಂದು ಮಾಹಿತಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X