ಸಾಲಿಗ್ರಾಮ ಕಯಾಕಿಂಗ್ ತಂಡದಿಂದ ವಿಶಿಷ್ಟ ಧ್ವಜಾರೋಹಣ

ಬ್ರಹ್ಮಾವರ, ಆ.15: ಸೀತಾ ನದಿಯಲ್ಲಿ ಕಯಾಕಿಂಗ್ ಮೂಲಕ ಪ್ರಕೃತಿಯ ಅದ್ಭುತ ಸೌಂದರ್ಯವನ್ನು ಜನರಿಗೆ ಪರಿಚಯಿಸುವುದರ ಜೊತೆಗೆ, ಪ್ರಕೃತಿ ಪ್ರೇಮದೊಂದಿಗೆ ದೇಶಪ್ರೇಮವನ್ನೂ ಬೆಳೆಸುವ ಸಂದೇಶವನ್ನು ಸಾರುತ್ತಿರುವ ಸಾಲಿಗ್ರಾಮ ಕಯಾಕಿಂಗ್ ತಂಡ, ಈ ಬಾರಿ ಮತ್ತೊಂದು ವಿನೂತನ ಪ್ರಯತ್ನಕ್ಕೆ ಸಾಕ್ಷಿಯಾಗಿದೆ.
ಈ ಬಾರಿ ನೀರಿನ ಆರ್ಭಟದ ನಡುವೆ ಸುಂದರವಾದ ಮರದ ಸೇತುವೆಯೊಂದನ್ನು ನಿರ್ಮಿಸಿ, ಅದರ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ವಿಶಿಷ್ಟವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿತು. ನಮ್ಮ ನಾಡು, ನಮ್ಮ ನದಿ, ನಮ್ಮ ಪ್ರಕೃತಿ ಮತ್ತು ನಮ್ಮ ರಾಷ್ಟ್ರಧ್ವಜ - ಇವೆಲ್ಲವನ್ನೂ ಒಂದೇ ವೇದಿಕೆಯಲ್ಲಿ ಬೆಸೆಯುವ ಮೂಲಕ ಸಾಲಿಗ್ರಾಮ ಕಯಾಕಿಂಗ್ ತಂಡದ ಈ ಪ್ರಯತ್ನವು ಸ್ವಾತಂತ್ರ್ಯ ದಿನಾಚರಣೆಗೆ ಮತ್ತಷ್ಟು ಅರ್ಥಪೂರ್ಣ ಮೆರುಗು ನೀಡಿತು.
ಈ ವಿಶೇಷ ಕಾರ್ಯಕ್ರಮದಲ್ಲಿ ಸಾಲಿಗ್ರಾಮ ಕಯಾಕಿಂಗ್‌ನ ಮುಖ್ಯಸ್ಥರಾದ ಮಿಥುನ್ ಕುರ್ಮಾ ಮೆಂಡನ್, ಲೋಕೇಶ್ ಸೇರಿದಂತೆ ತಂಡದ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Next Story




