ಉಡುಪಿ ಜಿಲ್ಲಾ ಸ್ಟೇಡಿಯಂ ಪೆವಿಲಿಯನ್‌ನ ಮೇಲ್ಛಾವಣಿ ಉದ್ಘಾಟನೆ

ಉಡುಪಿ, ಆ.15: ನಗರದ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲೆ ಕ್ರೀಡಾಂಗಣದ ಪೆವಿಲಿಯನ್‌ಗೆ ಸುಮಾರು 70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಮೇಲ್ಛಾವಣಿ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಶಾಸಕ ಮಂಜುನಾಥ್ ಭಂಡಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಶಿಲಾನ್ಯಾ: ಇದೇ ವೇಳೆ ಸಚಿವ ರಿಝ್ವಾನ್ ಅವರು ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದ ಬಳಿ ನಿರ್ಮಾಣಗೊಳ್ಳುವ ಬಾಸ್ಕೆಟ್ ಬಾಲ್ ಸಿಂಥೆಟಿಕ್ ಒಳಾಂಗಣ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.
ಸಚಿವರೊಂದಿಗೆ ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಎಂಎಲ್‌ಸಿ ಮಂಜು ನಾಥ್ ಭಂಡಾರಿ, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಪಂ ಸಿಇಒ ಪ್ರತೀಕ್ ಬಾಯಲ್ ಉಪಸ್ಥಿತರಿದ್ದರು.
ಇದೇ ವೇಳೆ ಅಜ್ಜರಕಾಡು ಪಾರ್ಕಿನ ಬಳಿ ಇರುವ ಹುತಾತ್ಮರ ಯುದ್ದ ಸ್ಮಾರಕಕ್ಕೆ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ರಿಝ್ವಾನ್ ಅರ್ಷದ್ ಭೇಟಿ ನೀಡಿ, ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸೈನಿಕರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.






