Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸದ್ಯ ಬಂಧನ ಎನಿಸಿರುವ ಎಐಯನ್ನು ಮೀರಿದರೆ...

ಸದ್ಯ ಬಂಧನ ಎನಿಸಿರುವ ಎಐಯನ್ನು ಮೀರಿದರೆ ನಂದನ: ಸತ್ಯಬೋಧ ಜೋಶಿ

ವಾರ್ತಾಭಾರತಿವಾರ್ತಾಭಾರತಿ19 Aug 2026 7:36 PM IST
share
ಸದ್ಯ ಬಂಧನ ಎನಿಸಿರುವ ಎಐಯನ್ನು ಮೀರಿದರೆ ನಂದನ: ಸತ್ಯಬೋಧ ಜೋಶಿ
ವಿಶ್ವ ಛಾಯಾಗ್ರಹಣ ದಿನಾಚರಣೆ- ಸುದ್ದಿ ಛಾಯಾಚಿತ್ರ ಪ್ರದರ್ಶನ

ಉಡುಪಿ, ಆ.19: ಈ ಯುಗದ ದೊಡ್ಡ ಜ್ಞಾನಿ ಕೃತಕ ಬುದ್ಧಿಮತ್ತೆ (ಎಐ). ಅದು ನಮಗೆ ವಿನಮ್ರತೆಯನ್ನು ಕಲಿಸಿ ಕೊಡುತ್ತದೆ. ಅದನ್ನು ನಾವು ಮೈಗೂಡಿಸಿಕೊಳ್ಳಬೇಕು. ಸದ್ಯ ಫೋಟೋಗ್ರಫಿ ಕ್ಷೇತ್ರದಲ್ಲಿ ಎಐ ನಮಗೆ ಬಂಧನ ಎನಿಸಿದರೂ ಅದನ್ನು ಮೀರಿದರೆ ಅದು ನಂದನ ಆಗುವುದರಲ್ಲಿ ಎರಡೂ ಮಾತಿಲ್ಲ ಎಂದು ಮಣಿಪಾಲ ಸ್ಕೂಲ್ ಆಫ್ ಕಮ್ಯುನಿಕೇಶನ್‌ನ ಪ್ರೊಫೆಸರ್ ಆಫ್ ಪ್ರಾಕ್ಟೀಸ್ ಸತ್ಯಬೋಧ ಜೋಶಿ ಹೇಳಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗ ದೊಂದಿಗೆ ಉಡುಪಿ ಪತ್ರಿಕಾ ಭವನದಲ್ಲಿ ಬುಧವಾರ ಆಯೋಜಿಸಲಾದ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯ ಕ್ರಮದಲ್ಲಿ ಅವರು ಸದಸ್ಯರ ಸುದ್ದಿ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ, ‘ಡಿಜಿಟಲ್- ಎಐ ಅಡಕತ್ತರಿ ನಡುವೆ ಛಾಯಾಗ್ರಹಣ’ ವಿಷಯದ ಕುರಿತು ಉಪನ್ಯಾಸ ನೀಡಿದರು.

ಫೋಟೋಗ್ರಫಿಯಲ್ಲಿನ ಹೊಸ ಹೊಸ ತಂತ್ರಜ್ಞಾನವು ನಮಗೆ ಹೊಸ ಜವಾಬ್ದಾರಿಯನ್ನು ನೀಡುತ್ತದೆ. ಇದೀಗ ಬಂದಿರುವ ಎಐ ಕೂಡ ನಮಗೆ ಹೊಸತನ್ನು ಕಲಿಯಲು ಸವಾಲು ನೀಡುತ್ತಿದೆ. ಎಐ ಸರಿಯಾಗಿ ಬಳಸಿ ಕೊಂಡರೇ ಅನುಕೂಲಗಳೇ ಜಾಸ್ತಿ. ಎಐ 10 ಹೆಜ್ಜೆ ಮುಂದಿಟ್ಟರೆ ನಾವು 100 ಹೆಜ್ಜೆ ಮುಂದೆ ಹೋಗಬೇಕಾಗುತ್ತದೆ. ಇದೇ ನಮ್ಮ ಮುಂದೆ ಇರುವ ಸವಾಲುಗಳು ಎಂದರು.

ಕೃತಕ ಬುದ್ಧಿಮತ್ತೆಯ ಮೂಲಕ ನಮಗೆ ಕಡಿಮೆಯಾಗಿರುವ ಸಿಗುವ ತಂತ್ರಜ್ಞಾನದ ಹಿಂದೆ ಬಹಳ ದೊಡ್ಡ ಬಂಡ ವಾಳ ಇರುತ್ತದೆ. ಇದು ಮುಂದಿನ ಹಂತ ತಲುಪಿದ ಬಳಿಕ ಸಾಕಷ್ಟು ದುಬಾರಿ ಆಗುತ್ತ ಹೋಗುತ್ತದೆ. ಯಾವುದೇ ರೀತಿಯ ತಂತ್ರಜ್ಞಾನ ಬಂದರೂ ಅದನ್ನು ನಾವು ಯಾವ ರೀತಿ ಬಳಸಿಕೊಳ್ಳುತ್ತೇವೆ ಎಂಬುದು ಮುಖ್ಯ. ನಿತ್ಯ ಪ್ರಯತ್ನ ದಿಂದ ಸಿಗುವುದು ಮಾತ್ರ ಗಟ್ಟಿಯಾಗಿರಲು ಸಾಧ್ಯ. ಇದು ಫೋಟೋಗ್ರಫಿ ಕ್ಷೇತ್ರಕ್ಕೆ ಮುಖ್ಯವಾಗಿ ಅನ್ವಯಿಸುತ್ತದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಮಣಿಪಾಲ ಮಾಹೆಯ ಸಾರ್ವಜನಿಕ ಸಂಪರ್ಕ, ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ನಿರ್ದೇಶಕ ಭರತ್ ಕುಮಾರ್ ಮಾತನಾಡಿ, ಛಾಯಾಗ್ರ್ರಹಣ ಎಂಬುದು ಕಾಲಚಕ್ರವನ್ನು ಒಂದು ಕ್ಷಣ ತಡೆ ಹಿಡಿದು ನಿಲ್ಲಿಸುವ ಪ್ರಕ್ರಿಯೆ ಆಗಿದೆ. ಇಂದು ಕಾಲ ಬದಲಾಗಿ ಹೊಸಹೊಸ ತಂತ್ರಜ್ಞಾನಗಳು ಬಂದರೂ ಫೋಟೋಗ್ರಫಿಯ ಮೂಲತತ್ವ ಬದಲಾಗಿಲ್ಲ. ಅದು ಕತ್ತಲಿನಿಂದ ಬೆಳಕಿಗೆ ಬರುವ ಕ್ರಿಯೆಯಾಗಿದೆ ಎಂದರು,

ಫೋಟೋಗ್ರಫಿ ಹಾಗೂ ಪತ್ರಿಕೋದ್ಯಮಗಳಿಗೆ ವೃತ್ತಿ ಸಂಹಿತೆ ಎಂಬುದು ಇದೆ. ಯಾವುದನ್ನು ಮಾಡಬೇಕು, ಯಾವುದನ್ನು ಮಾಡಬಾರದು ಎಂಬ ಆಲೋಚನಾ ಕ್ರಮ ಮನುಷ್ಯನಲ್ಲಿ ಇದೆಯೇ ಹೊರತು ಯಂತ್ರದಲ್ಲಿ ಬರುವು ದಿಲ್ಲ. ಹಾಗಾಗಿ ಯಂತ್ರಗಳನ್ನು ಬಳಸುವವರು ವೃತ್ತಿ ಸಂಹಿತೆಯನ್ನು ಗಟ್ಟಿಯಾಗಿ ಪಾಲಿಸಬೇಕಾಗುತ್ತದೆ ಎಂದು ಅವರು ಅಭಿಪ್ರಾಯ ಪಟ್ಟರು.

ಅಧ್ಯಕ್ಷತೆಯನ್ನು ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ವಹಿಸಿದ್ದರು. ಉಡುಪಿ ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಂಕಿತ್ ಶೆಟ್ಟಿ, ಜಿಲ್ಲಾ ಸಂಘದ ಕೋಶಾಧಿಕಾರಿ ಹರೀಶ್ ಕುಂದರ್ ಉಪಸ್ಥಿತರಿದ್ದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ರಾಜ್ಯ ಸಮಿತಿ ಸದಸ್ಯ ಆಸ್ಟ್ರೋ ಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಸಮಿತಿ ಸದಸ್ಯರಾದ ಚೇತನ್ ಮಟಪಾಡಿ ಕಾರ್ಯಕ್ರಮ ನಿರೂಪಿಸಿ, ಅಜಿತ್ ಆರಾಡಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X