ಹಿಂದುಳಿದ ವರ್ಗಗಳ ಕಾರ್ಯನಿರತ ಪತ್ರಕರ್ತರಿಗೆ ಮೀಡಿಯಾ ಕಿಟ್: ಅರ್ಜಿ ಅಹ್ವಾನ

ಉಡುಪಿ, ಆ.19: ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಕಾರ್ಯನಿರತ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಯಿಂದ ಮಾಧ್ಯಮ ಮಾನ್ಯತೆ ಕಾರ್ಡ್ ಹೊಂದಿರುವ ಕಾರ್ಯನಿರತ ಪತ್ರಕರ್ತರಿಗೆ 2026-27ನೇ ಸಾಲಿಗೆ ಮೀಡಿಯಾ ಕಿಟ್ ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಆಯುಕ್ತರಾದ ಎಂ.ಎನ್. ಅನುಚೇತ್ ತಿಳಿಸಿದ್ದಾರೆ.
ಇಲಾಖೆಯ ಹವ್ಯಾಸಿ ಮಾನ್ಯತೆ ಕಾರ್ಡ್ ಹೊಂದಿರುವ ಪತ್ರಕರ್ತರು ಹಾಗೂ ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹಾಗೂ ಸರ್ಕಾರದ ವ್ಯಾಪ್ತಿಗೆ ಒಳಪಡುವ ಅಕಾಡೆಮಿ/ನಿಗಮ/ಮಂಡಳಿ/ಇತ್ಯಾದಿ ಸರ್ಕಾರಿ ಸಂಸ್ಥೆಗಳಿಂದ ಈಗಾಗಲೇ ಮೀಡಿಯಾ ಕಿಟ್ ಪಡೆದಿರುವ ಕಾರ್ಯನಿರತ ಪತ್ರಕರ್ತರು ಮತ್ತೆ ಈ ಸಾಲಿನ ಮೀಡಿಯಾ ಕಿಟ್‌ಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.
ಬೆಂಗಳೂರಿನಲ್ಲಿರುವ ಮಾನ್ಯತೆ ಹೊಂದಿದ ಪತ್ರಕರ್ತರು ಕೇಂದ್ರ ಕಚೇರಿಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಹಾಗೂ ಜಿಲ್ಲಾ ಪತ್ರಕರ್ತರು ಆಯಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಂದ ಅರ್ಜಿ ನಮೂನೆಯನ್ನು ಪಡೆದುಕೊಂಡು ಇಲಾಖೆಯ ವೆಬ್‌ಸೈಟ್ ನ ಸುದ್ದಿ ಮತ್ತು ಪತ್ರಿಕಾ ಶಾಖೆಯ ವೆಬ್‌ಸೈಟ್‌ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸೆ.10ರೊಳಗೆ ಆಯಾ ಜಿಲ್ಲೆಗಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಧಿಕಾರಿಗಳಿಗೆ ಅಧಿಕೃತ, ದೃಢೀಕೃತ ದಾಖಲೆಗಳೊಂದಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಗಾಗಿ ಆಯಾ ಜಿಲ್ಲೆಗಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಧಿಕಾರಿಗಳನ್ನು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯ ಸುದ್ದಿ ಮತ್ತು ಪತ್ರಿಕಾ ಶಾಖೆಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.






