ಕೆಓಎಸ್ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಉಡುಪಿ, ಆ.21: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವತಿಯಿಂದ ಕೆ.ಓ.ಎಸ್ ಪರೀಕ್ಷೆಯು ಆಗಸ್ಟ್ 24ರಿಂದ ಸೆಪ್ಟಂಬರ್ 3ರವರೆಗೆ ಉಡುಪಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ, ಶಾಂತಿಯುತ ವಾಗಿ ಹಾಗೂ ದೋಷರಹಿತವಾಗಿ ನಡೆಯಲು ಮತ್ತು ಯಾವುದೇ ರೀತಿಯ ಅಕ್ರಮ, ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ಪರೀಕ್ಷಾ ಕೇಂದ್ರದ ಸುತ್ತಲಿನ 200ಮೀ. ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023ರ ಕಲಂ 163ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿದ್ದಾರೆ.
Next Story




