ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣ: ಔಷಧಿ ಖರೀದಿಗೆ ಸಹಾಯಧನ

ಉಡುಪಿ, ಆ.21: ಪ್ರಸಕ್ತ ಸಾಲಿನಲ್ಲಿ ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳ ವ್ಯಾಪ್ತಿಯ ಅಡಿಕೆ ಬೆಳೆ ಯಲ್ಲಿ ಕಂಡುಬರುತ್ತಿರುವ ಎಲೆ ಚುಕ್ಕೆ ರೋಗದ ನಿಯಂತ್ರಣಕ್ಕಾಗಿ ತೋಟಗಾರಿಕಾ ಇಲಾಖೆ ವತಿಯಿಂದ ಸಸ್ಯ ಸಂರಕ್ಷಣಾ ಕ್ರಮ ಕೈಗೊಳ್ಳುವ ಸಲುವಾಗಿ ಮೈಲುತುತ್ತು ಖರೀದಿಗೆ ಪ್ರತಿ ಹೆಕ್ಟೇರ್‌ಗೆ ರೂ.1500 ಸಹಾಯಧನದಂತೆ ಗರಿಷ್ಠ 2 ಹೆಕ್ಟೇರ್‌ಗಳಿಗೆ 3000 ರೂ. ಸಹಾಯಧನ ವಿತರಿಸಲು ಅವಕಾಶವಿದ್ದು, ಆಸಕ್ತ ರೈತರು ತಾವು ಖರೀದಿಸಿ ರುವ ಮೈಲುತುತ್ತು, ಜಿಎಸ್‌ಟಿ ಬಿಲ್ಲು, ಆರ್‌ಟಿಸಿ, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಅಕೌಂಟ್ ಪಾಸ್‌ಬುಕ್ ಛಾಯಾ ಪ್ರತಿಗಳೊಂದಿಗೆ ಉಡುಪಿ ತಾಲೂಕಿನ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.
ಇಲಾಖಾ ಮಾರ್ಗಸೂಚಿಯ ಅನುಸಾರ ಅರ್ಜಿಗಳನ್ನು ಜೇಷ್ಠತೆಯ ಆಧಾರದಲ್ಲಿ ಇಲಾಖೆ ನಿಗದಿಪಡಿಸಿದ ಗುರಿಗೆ ಅನುಗುಣವಾಗಿ ಸಹಾಯಧನಕ್ಕೆ ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೊಡ್ಡಣಗುಡ್ಡೆಯಲ್ಲಿರುವ ತೋಟ ಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಪ್ರಕಟಣೆ ತಿಳಿಸಿದೆ.




