ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಉಡುಪಿ ಡಿಸಿಗೆ ಮನವಿ

ಉಡುಪಿ, ಆ.21: ಮಹರ್ಷಿ ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಭ್ರಷ್ಟಾಚಾರದ ಹಗರಣದಲ್ಲಿ ಭಾಗಿಯಾಗಿ ರುವ ಆರೋಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಪರ ಜಿಲ್ಲಾಧಿಕಾರಿ ಅಭಿದ್ ಗದ್ಯಾಳ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್, ಪ್ರಮುಖರಾದ ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಪೃಥ್ವಿರಾಜ್ ಮಣಿಪಾಲ್, ಅಭಿರಾಜ್ ಸುವರ್ಣ, ರತ್ನಾಕರ ಇಂದ್ರಾಳಿ, ಭುಜಂಗ ನಾಯ್ಕ್, ಸದಾನಂದ ಪ್ರಭು ಮೊದಲಾದವರು ಉಪಸ್ಥಿತರಿದ್ದರು.
Next Story




