ಕಲ್ಯಾಣಪುರ ಮಿಲಾಗ್ರಿಸ್ ಪ.ಪೂ.ಕಾಲೇಜಿನ ರಕ್ಷಕ -ಶಿಕ್ಷಕ ಸಭೆ

ಉಡುಪಿ, ಆ.24: ಕಲ್ಯಾಣಪುರ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ 2026-27ರ ರಕ್ಷಕ-ಶಿಕ್ಷಕರ ಸಂಘದ ವಾರ್ಷಿಕ ಮಹಾಸಭೆ ಕಾಲೇಜಿನ ಭವ್ಯ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ನಿವೃತ್ತ ಪ್ರಾಧ್ಯಾಪಕಿ ಹಿಲ್ಡಾ ರೊಡ್ರಿಗಸ್ ಮಾತನಾಡಿ, ಶಿಕ್ಷಣವು ಕೇವಲ ಸಾಕ್ಷರತೆಗೆ ಸೀಮಿತವಾಗದೆ ವಿದ್ಯಾರ್ಥಿಗಳನ್ನು ಜ್ಞಾನವಂತರು, ಜವಬ್ದಾರಿಯುತ ಹಾಗೂ ಮೌಲ್ಯಧಾರಿತ ವ್ಯಕ್ತಿಗಳನ್ನಾಗಿ ರೂಪಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಮಿಲಾಗ್ರಿಸ್ ಸಂಸ್ಥೆಗಳ ಸಂಚಾಲಕ ಅತೀ ವಂ. ಫ್ರಾನ್ಸಿಸ್ ಲೂವಿಸ್ ಮಾತನಾಡಿ, ಪೋಷಕರು ಮಕ್ಕಳಿಗಾಗಿ ಮಾಡುವ ತ್ಯಾಗಗಳನ್ನು ಅರಿತುಕೊಂಡು ಅವರ ಪ್ರೀತಿ ಹಾಗೂ ಕೃತಜ್ಞತೆ ಸಲ್ಲಿಸುವ ಮನೋಭಾವ ವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರೆ.ಫಾ.ಮೆಲ್ವಿನ್ ಮೆಂಡೋನ್ಸಾ ಎಸ್.ಜೆ. ಮಾತನಾಡಿ ಮಕ್ಕಳ ಜೀವನ ದಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ. ಅವರ ಮಾತುಗಳನ್ನು ತಾಳ್ಮೆಯಿಂದ ಆಲಿಸಬೇಕು ಎಂದು ಹೇಳಿದರು.
ವೇದಿಕೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ವಿನ್ಸೆಂಟ್ ಡಿಸೋಜ ಹಾಗೂ ಕಾರ್ಯದರ್ಶಿ ಸತೀಶ್ ನಾಯ್ಕ್ ಉಪಸ್ಥಿತ ರಿದ್ದರು. ಉಪನ್ಯಾಸಕಿ ಪ್ರೀತಿಕಾ ಸ್ವಾಗತಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಲೊಯ್ಲೀಸ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಸ್ವಾತಿ ಮೂಲ್ಯ ವಂದಿಸಿದರು.






