ಕಾರು ಢಿಕ್ಕಿ: ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಮೃತ್ಯು

ಕೋಟ, ಆ.28: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಆ.24ರಂದು ರಾತ್ರಿ 8ಗಂಟೆ ಸುಮಾರಿಗೆ ಕೋಟ ಬೊಬ್ಬರಬೆಟ್ಟುವಿನ ಬಬರ್ಯಕಟ್ಟೆ ಸಮೀಪ ರಾ.ಹೆ.66ರಲ್ಲಿ ನಡೆದಿದೆ.
ಮೃತರನ್ನು ಗಿಳಿಯಾರು ನಿವಾಸಿ ಮಂಜು ಪೂಜಾರಿ(67) ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರು, ರಸ್ತೆ ದಾಟಲು ರಸ್ತೆ ಬದಿ ನಿಂತಿದ್ದ ಮಂಜು ಪೂಜಾರಿಗೆ ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಮಂಜು ಪೂಜಾರಿ, ಬ್ರಹ್ಮಾವರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story




