ಕುಂದಾಪುರ: ಕಾರು ಢಿಕ್ಕಿ; ಬೈಕ್ ಸವಾರ ಮೃತ್ಯು

ಕುಂದಾಪುರ : ಬೈಕಿಗೆ ಹಿಂದಿನಿಂದ ಕಾರು ಢಿಕ್ಕಿಯಾಗಿ, ಬೈಕ್ ಸವಾರ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ರಾ.ಹೆ. 66 ರ ಹೆಮ್ಮಾಡಿ ಸಮೀಪದ ಕನ್ನಡಕುದ್ರು ಕ್ರಾಸ್ ಬಳಿ ಸಂಭವಿಸಿದೆ.
ಹೆಮ್ಮಾಡಿ ಸಂತೋಷನಗರ ನಿವಾಸಿ ನರಸಿಂಹ ಆಚಾರ್ (60) ಸಾವನ್ಮಪ್ಪಿದವರು.
ಇವರು ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ವೇಗ ವಾಗಿ ಹಾಗೂ ಅಜಾಗರೂಕತೆಯಿಂದ ದೀಪಕ್ ಕುಮಾರ್ ಕಾರು ಚಲಾಯಿಸಿಕೊಂಡು ಬಂದು ಢಿಕ್ಕಿ ಹೊಡೆದಿರುವು ದಾಗಿದೆ. ಪರಿಣಾಮ ಬೈಕ್ ಸಹಿತ ರಸ್ತೆಗೆ ಗಂಭೀರ ಗಾಯಗೊಂಡ ನರಸಿಂಹ ಆಚಾರ್ ಅವರನ್ನು ಆಸ್ಪತ್ರೆಗೆ ಕರೆದೊ ಯ್ದರು, ಅಷ್ಟರೊಳಗೆ ಸಾವನ್ನಪ್ಪಿರುವುದಾಗಿದೆ.
ಸಂಚಾರ ಠಾಣಾ ಪಿಎಸ್ ಐ ಅನೂಪ್ ನಾಯಕ್ ಹಾಗೂ ಸಿಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




