Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೋಮು ಸಾಮರಸ್ಯದಿಂದ ಉಡುಪಿ ಜಿಲ್ಲೆಯ...

ಕೋಮು ಸಾಮರಸ್ಯದಿಂದ ಉಡುಪಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ: ಮಂಜುನಾಥ ಪೂಜಾರಿ

ವಾರ್ತಾಭಾರತಿವಾರ್ತಾಭಾರತಿ30 Aug 2026 7:42 PM IST
share
ಕೋಮು ಸಾಮರಸ್ಯದಿಂದ ಉಡುಪಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ: ಮಂಜುನಾಥ ಪೂಜಾರಿ

ಉಡುಪಿ, ಆ.30: ಜಾತಿ, ಧರ್ಮದ ವೈಷಮ್ಯವನ್ನು ಮರೆತು ಕೋಮು ಸಾಮರಸ್ಯದಿಂದ ಎಲ್ಲರೂ ಒಗ್ಗಟ್ಟಿನಿಂದ ಬದುಕಿದಾಗ ಜಿಲ್ಲೆ ಸರ್ವಾಂಗೀಣ ಅಭಿವೃದ್ಧಿ ಕಾಣಲು ಸಾಧ್ಯವಿದೆ ಎಂದು ಶ್ರೀನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮುದ್ರಾಡಿ ಅಭಿಪ್ರಾಯ ಪಟ್ಟಿದ್ದಾರೆ.

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ಶ್ರೀನಾರಾಯಣ ಗುರುಗಳ 172ನೇ ಜನ್ಮ ಜಯಂತಿ ಪ್ರಯುಕ್ತ ಬನ್ನಂಜೆ ಬಿಲ್ಲವರ ಸೇವಾ ಸಂಘದಲ್ಲಿ ರವಿವಾರ ಹಮ್ಮಿಕೊಂಡಿದ್ದ ಗುರುಗಳ ಸಂದೇಶ ಸಾಮರಸ್ಯ ಜಾಥಾ ಮತ್ತು ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಕರಾವಳಿಯಲ್ಲಿ ಉದ್ಯಮ, ಕೈಗಾರಿಕೆ, ಐಟಿ ಬಿಟಿ, ಪ್ರವಾಸೋದ್ಯಮ ಸಹಿತ ಸರ್ವಾಂಗೀಣ ಅಭಿವೃದ್ಧಿಗಾಗಿ ನಾವೆ ಲ್ಲರೂ ಜಾತಿ, ಧರ್ಮದ ವೈಷಮ್ಯ ಮರೆತು ಸಾಮರಸ್ಯದಿಂದ ಒಗ್ಗಟ್ಟಿನಲ್ಲಿ ಬದುಕಬೇಕು. ಈ ಮೂಲಕ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಅಳವಡಿಸಿಕೊಂಡ ಯುವ ಮನಸ್ಸುಗಳ ಭವಿಷ್ಯ ರೂಪಿಸುವುದಕ್ಕೆ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.

ಶಿಕ್ಷಣ, ಆರೋಗ್ಯ, ಸಂಪನ್ಮೂಲ ಕ್ಷೇತ್ರದಲ್ಲಿ ಕರಾವಳಿ ಮುಂಚೂಣಿ ಯಲ್ಲಿದ್ದರೂ ಉದ್ಯಮ ಸಂಸ್ಥೆಗಳು ಹೂಡಿಕೆ ಮಾಡುವುದಕ್ಕೆ ಮುಂದೆ ಬರುತ್ತಿಲ್ಲ. ಜಾತಿ, ಧರ್ಮದ ಹೆಸರಿನಲ್ಲಿ ಕೋಮು ಸಾಮರಸ್ಯ ಕದಡುವ ಪ್ರಯತ್ನ ನಡೆ ಯುತ್ತಿದ್ದು, ಇದರಿಂದ ಕರಾವಳಿ ಹೆಸರಿಗೆ ಚ್ಯುತಿ ಬರುತ್ತಿದೆ. ಜಾತಿ-ಧರ್ಮದ ಹೆಸರಿನಲ್ಲಿ ಹೋರಾಟ ಮಾಡದೇ ನಾವೆಲ್ಲರೂ ಸಂಘಟಿತ ರಾಗಿ ಸಮಾಜದ ಸ್ವಾಸ್ಥ್ಯಕ್ಕಾಗಿ ಕೋಮು ಸಾಮರಸ್ಯದಿಂದ ಬದುಕಬೇಕು ಎಂದರು.

ನಮ್ಮ ಹೋರಾಟ ಧರ್ಮಾಧಾರಿತವಾಗಿರದೇ ಬದುಕಿನ ಆಧಾರದಲ್ಲಿ ಹೋರಾಟ ಮಾಡಬೇಕು. ನಾರಾಯಣ ಗುರುಗಳು ಒಂದು ಸಮಾಜಕ್ಕೆ ಸೀಮಿತವಾಗಿಲ್ಲ. ಜಾತಿ, ಮತ, ಪಂಥಗಳನ್ನು ಮೀರಿ ಸಮಾಜದಲ್ಲಿ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಅಳವಡಿಸಿಕೊಂಡಿರುವುದನ್ನು ನಾವು ಕಂಡಿದ್ದೇವೆ. ಹೀಗಾಗಿ ದುಶ್ಚಟಗಳಿಂದ ದೂರ ವಿದ್ದು, ನೆಮ್ಮದಿಯ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಕಾರ್ಯಪ್ರವೃತ್ತರಾಗಬೇಕು. ಈ ವಿಚಾರದಲ್ಲಿ ರಾಜಕೀಯ ವಿರೋಧವನ್ನು ಮರೆತು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಮುನ್ನುಡಿ ಬರೆಯಬೇಕು ಎಂದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ನಾರಾಯಣ ಗುರುಗಳ ಜನ್ಮ ದಿನಾಚರಣೆಯಲ್ಲಿ ಶಾಲಾ ಮಕ್ಕಳನ್ನು ಸೇರಿಸಿಕೊಳ್ಳುವ ವ್ಯವಸ್ಥೆ ಯಾಗಬೇಕು. ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಕರಾವಳಿಯ ಎಲ್ಲಾ ಶಾಸಕರು ಮಾಜಿ ಸಚಿವ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಸಿಎಂ ಡಿಕೆಶಿ ಬಳಿ ನಿಯೋಗ ತೆರಳಿ ಶ್ರೀನಾರಾಯಣ ಗುರುಗಳ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ. ಅನುದಾನಕ್ಕೆ ಕೇಳಿಕೊಳ್ಳುತ್ತೇವೆ. ರಾಜಕೀಯ ವಿರೋಧ ಬದಿಗೊತ್ತಿ ನಮ್ಮ ನಡುವಿನ ಕಂದಕವನ್ನು ತೊರೆದು ಸಾಮರಸ್ಯದಿಂದ ಬಾಳೋಣ ಎಂದರು.

ಪ್ರತಿಮೆ ಸ್ಥಾಪನೆಗೆ ಒತ್ತಾಯ: ಅಧ್ಯಕ್ಷತೆ ವಹಿಸಿದ್ದ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಜಿಲ್ಲಾಧ್ಯಕ್ಷ ಪ್ರವೀಣ್ ಎಂ. ಪೂಜಾರಿ ಮಾತನಾಡಿ, ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಸೂಕ್ತ ಅನುದಾನ ಘೋಷಿಸಬೇಕು. ವಿಧಾನ ಸಭೆಯ ಮುಂಭಾಗ ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರತಿಮೆ ಸ್ಥಾಪಿಸಬೇಕು. ಗುರುಗಳ ಜಯಂತಿಯಂದು ಸಾರ್ವತ್ರಿಕ ರಜೆ ಘೋಷಿಸ ಬೇಕು. ಎಲ್ಲಾ ಶಾಲಾ ಕಾಲೇಜುಗಳಲ್ಲಿ ಆಚರಣೆಯ ಜತೆಗೆ ಮಕ್ಕಳಿಗೆ ನಾರಾಯಣ ಗುರುಗಳ ತತ್ವ ಸಂದೇಶವನ್ನು ಬೋಧನೆ ಮಾಡಬೇಕೆಂದು ಆಗ್ರಹಿಸಿದರು.

ಮಾಜಿ ಶಾಸಕ ಕೆ. ರಘುಪತಿ ಭಟ್, ಶಿವಸಾಗರ್ ಗ್ರೂಪ್ ಆಫ್‌ನ ಆಡಳಿತ ನಿರ್ದೇಶಕ ಪ್ರಭಾಕರ್ ಪೂಜಾರಿ, ಕಾಪು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ ಅಡ್ವೆ, ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಶ್ರೀಬ್ರಹ್ಮಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ ಆದಿಉಡುಪಿ ಅಧ್ಯಕ್ಷ ಸೂರ್ಯೋದಯ ಪೆರಂಪಳ್ಳಿ, ಬಬ್ಬುಸ್ವಾಮಿ ದೈವಸ್ಥಾನ ಮಣಿಪಾಲ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಮಣಿಪಾಲ, ಬಿಲ್ಲವ ಸೇವಾ ಸಂಘ ಸಂತೆಕಟ್ಟೆ ಗೌರವಾಧ್ಯಕ್ಷ ಭಾಸ್ಕರ್ ಜತ್ತನ್, ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಗೌರವಾ ಧ್ಯಕ್ಷ ದಿವಾಕರ್ ಸನಿಲ್, ಬಿಲ್ಲವ ಮಹಾಮಂಡಳ ಮೂಲ್ಕಿ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ಉಪಸ್ಥಿತರಿದ್ದರು.

ಸುನೀಲ್ ಕುಮಾರ್ ಮಲ್ಪೆ ವಂದಿಸಿದರು. ತೇಜಸ್ ಜೆ. ಬಂಗೇರ ಕಾರ‌್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X