ಬೈಂದೂರು, ಆ.31: ಇಲ್ಲಿನ ಯಡ್ತರೆ ಗ್ರಾಮದ ತೂದಳ್ಳಿ ಎಂಬಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದ ವಿಜಯ ಆಚಾರಿ (70) ಎನ್ನುವವರು ಆ.29 ರಂದು ಕೃಷಿ ಕೆಲಸ ಮಾಡುತ್ತಿದ್ದಾಗ ವಿಷಕಾರಿ ಹಾವು ಕಡಿದು ಚಿಕಿತ್ಸೆಗೆ ದಾಖಲಾಗಿದ್ದು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ವರದಿಯಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.