ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆಯ ಗುಣ ಮುಖ್ಯ: ಸಚಿನ್‌ಚಂದ್ರ

ಉಡುಪಿ, ಸೆ.2: ಬದಲಾಗುತ್ತಿರುವ ವಾಣಿಜ್ಯ ಮತ್ತು ನಿರ್ವಹಣಾ ಕ್ಷೇತ್ರದಲ್ಲಿ ಉತ್ತಮ ಅವಕಾಶಗಳನ್ನು ಪಡೆಯಲು ವಿದ್ಯಾರ್ಥಿಗಳು ವೃತ್ತಿಪರ ಕೌಶಲ್ಯಗಳೊಂದಿಗೆ ನಾಯಕತ್ವ ಮತ್ತು ಉದ್ಯಮಶೀಲತೆಯ ಗುಣಗಳನ್ನು ಬೆಳೆಸಿಕೊ ಳ್ಳಬೇಕು ಎಂದು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಇದರ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಸಚಿನ್ ಆರ್.ಚಂದ್ರ ಹೇಳಿದ್ದಾರೆ.
ಅಜ್ಜರಕಾಡಿನ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾಣಿಜ್ಯ ಮತ್ತು ನಿರ್ವಹಣಾ ಸಂಘ’ವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಕಾಲೇಜಿನ ಪ್ರಾಂಶುಪಾಲೆ ಪ್ರೊ.ನಿಕೇತನ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಮುಖ್ಯಸ್ಥ ಪ್ರೊ.ಕೃಷ್ಣ ಭಟ್ ಹಾಗೂ ಐಕ್ಯೂಎಸಿ ಸಂಚಾಲಕಿ ಪ್ರೊ.ಶ್ರೀಮತಿ ಅಡಿಗ ಉಪಸ್ಥಿತರಿದ್ದರು. ವಾಣಿಜ್ಯ ಮತ್ತು ನಿರ್ವಹಣಾ ಸಂಘದ ಸಂಯೋಜಕ ಡಾ.ರವೀಶ ಬಿ ಸ್ವಾಗತಿಸಿದರು. ಸಮೀಕ್ಷಾ ಕಾರ್ಯಕ್ರಮ ನಿರೂಪಿಸಿದರು. ಭವ್ಯಶ್ರೀ ಪ್ರಾರ್ಥಿಸಿದರು. ಸಂಚಿತಾ ವಂದಿಸಿದರು.
Next Story




