ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ

ಅಜೆಕಾರು, ಸೆ.2: ವಿಪರೀತ ಮದ್ಯಪಾನ ಮಾಡುವ ಅಭ್ಯಾಸವನ್ನು ಹೊಂದಿದ್ದ ದೊಂಡೆರಗಂಡಿ ಪ್ರಭಾ ಆರ್ಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ತಿಕೇಯನ್(28) ಎಂಬವರು ಆ.31ರಂದು ರಾತ್ರಿ ವೇಳೆ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳ್ಮಣ್ ಗ್ರಾಮದ ಕುಂಟೊಟ್ಟು ನಿವಾಸಿ ಆಸ್ಟಿನ್(53) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಸೆ.1ರಂದು ರಾತ್ರಿ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಜೆಕಾರು: ವಿಪರೀತ ಮದ್ಯಪಾನ ಮಾಡುವ ಚಟದಿಂದ ಮನನೊಂದು ಆ.19ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಹೆರ್ಮುಂಡೆ ಗ್ರಾಮದ ಶಾಂತಿ ನಗರ ನಿವಾಸಿ ಉದಯ ನಾಯ್ಕ(50) ಎಂಬವರು ಸೆ.2ರಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




