ಉಡುಪಿ| ಜಿಲ್ಲಾ ಮಟ್ಟದ ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿ: ಅರ್ಜಿ ಆಹ್ವಾನ

ಉಡುಪಿ, ಸೆ.2: ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಜಿಲ್ಲೆಯ 5ರಿಂದ 18 ವರ್ಷದೊಳಗಿನ ಮಕ್ಕಳಿಂದ ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರಶಸ್ತಿಗೆ ಆಯ್ಕೆಯಾಗುವ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿದ್ದು, ಸಾಧನೆ ಅಸಾಧಾರಣವೆಂದು ಸಮರ್ಥಿ ಸಲು ಪೂರಕ ದಾಖಲೆಗಳೊಂದಿಗೆ ಪ್ರಸ್ತಾವನೆಯನ್ನು ಜಿಲ್ಲಾ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸೆಪ್ಟಂಬರ್ 30ರ ಒಳಗೆ ಸಲ್ಲಿಸಬಹುದು. ಹಿಂದಿನ ವರ್ಷಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಪಡೆದ ಮಕ್ಕಳು ಮತ್ತೆ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.
ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯ ದೂ.ಸಂಖ್ಯೆ: 0820-2574978ನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.




