ವೈದ್ಯರಿಂದ ಕುಟುಂಬ ಸಮ್ಮಿಲನ, ಪ್ರತಿಭಾ ಪ್ರದರ್ಶನ

ಉಡುಪಿ, ಸೆ.3: ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (ಐಎಂಎ) ಉಡುಪಿ -ಕರಾವಳಿ ವತಿಯಿಂದ ವೈದ್ಯರು ಹಾಗೂ ಅವರ ಕುಟುಂಬ ಸದಸ್ಯರಿಗಾಗಿ ವಿಶೇಷ ಕುಟುಂಬ ಸಭೆ ಜರಗಿತು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಇದೇ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು. ಜಾದೂಗಾರ ಕುದ್ರೋಳಿ ಗಣೇಶ್ ಅವರ ಜಾದೂ ಪ್ರದರ್ಶನವು ಎಲ್ಲರ ಗಮನ ಸೆಳೆಯಿತು.
ಐಎಂಎ ಅಧ್ಯಕ್ಷ ಅಶೋಕ್ ಕುಮಾರ್, ಕಾರ್ಯದರ್ಶಿ ಡಾ.ಮಾನಸ್ ಮಾತನಾಡಿದರು. ಕೋಶಾಧಿಕಾರಿ ಡಾ.ಸನತ್ ರಾವ್ ವಂದಿಸಿದರು. ಕಾರ್ಯಕ್ರಮದಲ್ಲಿ ವೈದ್ಯರು, ಅವರ ಕುಟುಂಬದ ಸದಸ್ಯರು ಹಾಗೂ ಮಕ್ಕಳು ಉತ್ಸಾಹದಿಂದ ಭಾಗವಹಿಸಿದ್ದರು.
Next Story




