ವಿಟ್ಲಪಿಂಡಿ ಪ್ರಯುಕ್ತ ರಾಜ್ಯಮಟ್ಟದ ರೀಲ್ಸ್ ಸ್ಪರ್ಧೆ

ಉಡುಪಿ, ಸೆ.3: ಶ್ರೀಕೃಷ್ಣ ಮಠ ಪರ್ಯಾಯ ಶೀರೂರು ಮಠ ಉಡುಪಿ ಆಶ್ರಯದಲ್ಲಿ ’ಉಡುಪಿಗೆ ಬನ್ನಿ’ ನೇತೃತ್ವದಲ್ಲಿ ಎನ್.ಎನ್.ಇನ್ಫ್ರಾಸ್ಟ್ರಕ್ಚರ್ ಡೆವಲಪರ್ಸ್, ಚಿತ್ರಕೂಟ ಆಯುರ್ವೇದ, ಅನಂತ ವೈದಿಕ ಕೇಂದ್ರ ಉಡುಪಿ ಸಹಕಾರದೊಂದಿಗೆ ವಿಟ್ಲಪಿಂಡಿ ಪ್ರಯುಕ್ತ ’ಕೃಷ್ಣ ರಂಗ’ ರಾಜ್ಯಮಟ್ಟದ ರೀಲ್ಸ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಈ ಸ್ಪರ್ಧೆಯ ಪೋಸ್ಟರ್‌ನ್ನು ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಸ್ವಾಮೀಜಿ ಬುಧವಾರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ’ಉಡುಪಿಗೆ ಬನ್ನಿ’ ನಿರ್ವಾಹಕ ಡಾ.ಗಣೇಶ್ ಪ್ರಸಾದ್ ಜಿ. ನಾಯಕ್, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು, ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ವಿಭಾಗೀಯ ಅಧ್ಯಕ್ಷ ಉದಯ ನಾಯ್ಕ್ ಮುಂತಾದವರು ಉಪಸ್ಥಿತರಿದ್ದರು.
ಸ್ಪರ್ಧಿಗಳು ಸೆ.5ರಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆಯುವ ವಿಟ್ಲಪಿಂಡಿಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಆಯ್ದ ಅಂಶಗಳನ್ನು ರೀಲ್ಸ್ ನಲ್ಲಿ ಪ್ರಸ್ತುತಪಡಿಸಬೇಕು. ರೀಲ್ಸ್ ಅನ್ನು ಇನ್ಸ್ಟಾಗ್ರಾಮ್‌ನಲ್ಲಿ ಪ್ರಕಟಿಸಿ ’ಉಡುಪಿಗೆ ಬನ್ನಿ’ ಕೊಲೇಬೊರೇಟ್ ಮಾಡಬೇಕು. ರೀಲ್ಸ್ ಕಳುಹಿಸಲು ಸೆ.15 ಕೊನೆಯ ದಿನವಾಗಿದ್ದು ಫಲಿತಾಂಶವನ್ನು ಸೆ.19ಕ್ಕೆ ಪ್ರಕಟಿಸ ಲಾಗುವುದು. ಪ್ರಥಮ ಬಹುಮಾನ 10ಸಾವಿರ, ದ್ವಿತೀಯ 5ಸಾವಿರ ರೂ., ಮತ್ತು 5 ಮಂದಿಗೆ ಒಂದು ಸಾವಿರ ಸಮಾಧಾನಕರ ಬಹುಮಾನ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.






