ಜೆಸಿಬಿ ಆಪರೇಟರ್ ನಾಪತ್ತೆ

ಪಡುಬಿದ್ರಿ, ಸೆ.3: ಮುಲ್ಕಿಯಲ್ಲಿ ಜೆಸಿಬಿ ಆಪರೇಟಿಂಗ್ ಕೆಲಸ ಮಾಡಿ ಕೊಂಡಿದ್ದ ನಡ್ಸಾಲು ಗ್ರಾಮದ ಕಂಚಿನಡ್ಕ ನಿವಾಸಿ ಶಿವರಾಮ ಪೂಜಾರಿ(41) ಎಂಬವರು ಆ.23ರಂದು ಕೆಲಸಕ್ಕೆ ಹೋಗುವುದಾಗಿ ಹೇಳಿ ಹೋದವರು ಈವರೆಗೆ ವಾಪಸು ಬಾರದೆ ನಾಪತ್ತೆಯಾಗಿದ್ದಾರೆ.
5 ಅಡಿ 1 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪಡುಬಿದ್ರೆ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Next Story




