ವ್ಯಕ್ತಿ ನಾಪತ್ತೆ

ಕುಂದಾಪುರ, ಸೆ.3: ಶಿವಮೊಗ್ಗದ ಹೋಟೆಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಕಾಳಾವರ ನಿವಾಸಿ ಸುಧಾಕರ ಶೆಟ್ಟಿ(40) ಎಂಬವರು ಮೇ 7ರಂದು ಶಿವಮೊಗ್ಗಕ್ಕೆ ಕೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೋದವರು ನಾಪತ್ತೆಯಾಗಿದ್ದಾರೆ.
5 ಅಡಿ 5 ಇಂಚು ಎತ್ತರ, ಸಾಧಾರಣ ಶರೀರ, ದುಂಡು ಮುಖ, ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಮೊ.ನಂ: 9480805468, ಕುಂದಾಪುರ ವೃತ್ತ ಪೊಲೀಸ್ ನಿರೀಕ್ಷಕರು ಮೊ.ನಂ: 9480805433 ಹಾಗೂ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹು ದಾಗಿದೆ ಎಂದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
Next Story




