ಅಡಿಕೆ ಎಲೆ ಚುಕ್ಕೆರೋಗ ನಿಯಂತ್ರಣಕ್ಕಾಗಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ ಬೆಳೆಯಲ್ಲಿ ಕಂಡು ಬರುತ್ತಿರುವ ಎಲೆ ಚುಕ್ಕೆ ರೋಗದ ನಿಯಂತ್ರಣಕ್ಕಾಗಿ ತೊಟಗಾರಿಕೆ ಇಲಾಖೆ ವತಿಯಿಂದ ಸಸ್ಯ ಸಂರಕ್ಷಣಾ ಕ್ರಮ ಕೈಗೊಳ್ಳುವ ಸಲುವಾಗಿ ಮೈಲುತುತ್ತು ಮತ್ತು ಎಲೆಚುಕ್ಕೆ ರೋಗಕ್ಕೆ ಶಿಫಾರಸ್ಸು ಮಾಡಿರುವ ಸಸ್ಯಸಂರಕ್ಷಣಾ ಔಷಧಿ ಖರೀದಿಗೆ ಪ್ರತಿ ಹೆಕ್ಟೇರಿಗೆ 3000ರೂ.(ಕೇಂದ್ರದ ಪಾಲು ರೂ.1500 ಹಾಗೂ ರಾಜ್ಯದ ಪಾಲು 1500ರೂ.) ಹಾಗೂ ಗರಿಷ್ಠ 2 ಹೆಕ್ಟೇರ್‌ಗಳಿಗೆ 6000ರೂ.ಗಳ ಸಹಾಯಧನ ಸವಲತ್ತು ವಿತರಿಸಲು ಅವಕಾಶವಿದ್ದು, ಆಸಕ್ತ ರೈತರು ತಾವು ಖರೀದಿಸಿರುವ ಅಧಿಕೃತ ಬಿಲ್ಲಿನೊಂದಿಗೆ ಆರ್‌ಟಿಸಿ, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್‌ಬುಕ್ ನಕಲು ಪ್ರತಿಯೊಂದಿಗೆ ಅರ್ಜಿ ಸಲ್ಲಿಸ ಬಹುದಾಗಿದೆ.
ಇಲಾಖಾ ಮಾರ್ಗಸೂಚಿಯ ಅನುಸಾರ ಅರ್ಜಿಗಳನ್ನು ಜೇಷ್ಠತೆಯ ಆಧಾರದಲ್ಲಿ ಇಲಾಖೆ ನಿಗದಿಪಡಿಸಿದ ಗುರಿಗೆ ಅನುಗುಣವಾಗಿ ಸಹಾಯಧನಕ್ಕೆ ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ, ದೊಡ್ಡಣಗುಡ್ಡೆ ಕಚೇರಿಯನ್ನು ಸಂಪರ್ಕಿಸುವಅತೆ ಪ್ರಕಟಣೆ ತಿಳಿಸಿದೆ.




