ಅಪರ ಸರಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ, ಸೆ.4: ಕುಂದಾಪುರ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರಕಾರಿ ವಕೀಲರ ಹುದ್ದೆ ನೇಮಕಾತಿಗೆ ಆಸಕ್ತ, ಏಳು ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆ.19 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಆಡಳಿತ ಶಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Next Story




