Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನಾಲ್ಕು ತಿಂಗಳೊಳಗೆ ತ್ರಾಸಿ - ಮರವಂತೆ...

ನಾಲ್ಕು ತಿಂಗಳೊಳಗೆ ತ್ರಾಸಿ - ಮರವಂತೆ ಬೀಚ್ ಅಭಿವೃದ್ಧಿ ಪೂರ್ಣ: ಪ್ರವಾಸೋದ್ಯಮ ಸಚಿವ ಕೆ.ಜೆ ಜಾರ್ಜ್ ಭರವಸೆ

ವಾರ್ತಾಭಾರತಿವಾರ್ತಾಭಾರತಿ7 Sept 2026 8:22 PM IST
share
ನಾಲ್ಕು ತಿಂಗಳೊಳಗೆ ತ್ರಾಸಿ - ಮರವಂತೆ ಬೀಚ್ ಅಭಿವೃದ್ಧಿ ಪೂರ್ಣ: ಪ್ರವಾಸೋದ್ಯಮ ಸಚಿವ ಕೆ.ಜೆ ಜಾರ್ಜ್ ಭರವಸೆ

ಮರವಂತೆ (ಕುಂದಾಪುರ), ಸೆ.7: ಕಳೆದ ಕೆಲವು ವರ್ಷಗಳಿಂದ ನಡೆಯುತ್ತಿರುವ ತ್ರಾಸಿ-ಮರವಂತೆ ಬೀಚ್ ಅಭಿವೃದ್ಧಿ ಕಾಮಗಾರಿಗೆ ವೇಗ ನೀಡಿ ಮುಂದಿನ ಮೂರ್ನಾಲ್ಕು ತಿಂಗಳೊಳಗೆ ಪೂರ್ಣಗೊಳಿಸಿ ಪ್ರವಾಸಿಗರ ಬಳಕೆಗೆ ಅವಕಾಶ ಮಾಡಿಕೊಡಲಾಗುವುದು ಎಂದು ರಾಜ್ಯ ಇಂಧನ ಮತ್ತು ಪ್ರವಾಸೋದ್ಯಮ ಇಲಾಖೆಯ ಸಚಿವ ಕೆ.ಜೆ.ಜಾರ್ಜ್ ಭರವಸೆ ನೀಡಿದ್ದಾರೆ.

ಅರಬಿಸಮುದ್ರ ಮತ್ತು ನದಿಯ ನಡುವೆ ರಾಷ್ಟ್ರೀಯ ಹೆದ್ದಾರಿ 66 ಹಾದು ಹೋಗುವ ಅದ್ಭುತ ಪ್ರಾಕೃತಿಕ ಸೌಂದರ್ಯಕ್ಕೆ ವಿಶ್ವ ಪ್ರಸಿದ್ಧಿ ಪಡೆದಿರುವ ತ್ರಾಸಿ- ಮರವಂತೆ ಬೀಚ್‌ಗೆ ಇಂದು ಭೇಟಿ ನೀಡಿ ಅಲ್ಲಿನ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದ ಬಳಿಕ ಅವರು ಈ ವಿಷಯ ತಿಳಿಸಿದರು.

ತ್ರಾಸಿ-ಮರವಂತೆ ಬೀಚ್‌ನಲ್ಲಿ ಪಾಕಿರ್ಂಗ್, ಫುಡ್‌ಕೋರ್ಟ್, ಸೈಕಲ್ ಟ್ರ್ಯಾಕ್, ಬಯಲು ರಂಗಮಂದಿರ ವನ್ನೊಳಗೊಂಡ ಆ್ಯಂಪಿ ಥಿಯೇಟರ್ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಸುಮಾರು 9.95 ಕೋಟಿ ರೂ. ವೆಚ್ಚದಲ್ಲಿ ಕಳೆದ 2 ವರ್ಷಗಳಿಂದ ನಡೆಯುತ್ತಿದ್ದು, ಕಾಮಗಾರಿಗೆ ವೇಗ ನೀಡುವುದರೊಂದಿಗೆ ತ್ವರಿತಗತಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದರು.

ಇದನ್ನು ಜಿಲ್ಲೆಯ ಪ್ರಮುಖ ಪ್ರವಾಸೋದ್ಯಮ ತಾಣವಾಗಿ ಅಭಿವೃಧ್ಧಿ ಗೊಳಿಸಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ 66ರ ಒಂದು ಬದಿಯಲ್ಲಿರುವ ಪ್ರವಾಸೋದ್ಯಮ ಇಲಾಖೆಗೆ ಸೇರಿದ ಹೊಟೇಲ್ ಹಾಗೂ ಬೀಚ್‌ಗೆ ನೇರ ಸಂಪರ್ಕ ಕಲ್ಪಿಸಲು ಹೆದ್ದಾರಿಗೆ ಅಡ್ಡಲಾಗಿ ಸ್ಕೈವಾಕ್ ನಿರ್ಮಾಣಕ್ಕೆ ನಿರ್ಧರಿ ಸಲಾಗಿದ್ದು, ಇದಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದೊಂದಿಗೆ ಮಾತುಕತೆ ನಡೆಸಲಾಗುವುದು ಎಂದರು.

ಕರಾವಳಿ ಭಾಗದಲ್ಲಿ ಬೀಚ್‌ಗಳನ್ನು ಅಭಿವೃದ್ಧಿಗೊಳಿಸಿ, ಕುಡಿಯವ ನೀರು, ಬೆಳಕಿನ ವ್ಯವಸ್ಥೆ, ಸುಸಜ್ಜಿತ ಶೌಚಗೃಹ, ವಾಹನಗಳ ಪಾರ್ಕಿಂಗ್‌ಗೆ ಸೂಕ್ತ ವ್ಯವಸ್ಥೆ, ಆಸನದ ವ್ಯವಸ್ಥೆ ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳನ್ನು ಪ್ರವಾಸಿ ಗರಿಗೆ ಕಲ್ಪಿಸಿದ್ದಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಇನ್ನಷ್ಟು ಬಲ ದೊರೆತು ಪ್ರವಾಸಿಗರ ಸಂಖ್ಯೆ ಹೆಚ್ಚುವುದರೊಂದಿಗೆ ಸ್ಥಳೀಯ ಉದ್ಯೋಗಾವಕಾಶ ಗಳಿಗೂ ಉತ್ತೇಜನ ಸಿಗಲಿದೆ ಎಂದ ಅವರು ಮುಂದಿನ ಕಾಮಗಾರಿ ವೇಳೆ ಇದಕ್ಕೆ ಒತ್ತು ನೀಡಲಾಗುವುದು ಎಂದರು.

ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ವಿಪುಲ ಅವಕಾಶಗಳಿವೆ. ಹಾಗೆಂದು ಅಭಿವೃದ್ಧಿ ಕಾಮಗಾರಿ ಗಳಿಗೆ ಅನಗತ್ಯ ವೆಚ್ಚ ಮಾಡದೇ ಸಾರ್ವಜನಿಕರು ಹಾಗೂ ಪ್ರವಾಸಿಗರ ಅಗತ್ಯಕ್ಕೆ ಅನುಗುಣವಾಗಿ ಕಾಮಗಾರಿ ಗಳನ್ನು ಕೈಗೊಳ್ಳಲಾಗುವುದು ಎಂದವರು ಭರವಸೆ ನೀಡಿದರು.

ಕಡಲು ಮತ್ತು ನದಿ ಮಧ್ಯೆ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 1.5 ಕಿ.ಮೀ. ಉದ್ದವಿರುವ ತ್ರಾಸಿ ಮತ್ತು ಮರವಂತೆ ಬೀಚ್‌ನಲ್ಲಿ ತಡೆಬೇಲಿ ಇಲ್ಲದೇ ಇರುವುದರಿಂದ ಪ್ರವಾಸಿಗರು ಹೆದ್ದಾರಿ ಬದಿಗಳಲ್ಲಿ ಎಲ್ಲೆಂದರಲ್ಲಿ ವಾಹನವನ್ನು ನಿಲ್ಲಿಸಿ ಬೀಚ್‌ಗೆ ಇಳಿಯುತ್ತಾರೆ. ಈ ಬಗ್ಗೆ ನಿಗಾ ವಹಿಸಲು ಹಾಗೂ ಸುರಕ್ಷತಾ ದೃಷ್ಟಿಯಿಂದ ಸ್ಥಳೀಯ ಜೀವರಕ್ಷಕರನ್ನು ಅಗತ್ಯ ತರಬೇತಿ ನೀಡಿ ನೇಮಕ ಮಾಡಲಾಗುವುದು ಎಂದರು.

ಜಿಲ್ಲೆಯಲ್ಲಿ ‘ಟೆಂಪಲ್ ಟೂರಿಸಂ’ನ್ನು ಅಭಿವೃದ್ಧಿ ಪಡಿಸಲು ಉತ್ತಮ ಅವಕಾಶಗಳಿವೆ. ತಿರುಪತಿಯಂತೆ ಇದನ್ನು ವ್ಯವಸ್ಥಿತವಾಗಿ ನಡೆಸಲು ಬೇಕಾದ ಯೋಜನೆಯನ್ನು ರೂಪಿಸಲು ಅವರು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ಗಳನ್ನು ನೀಡಿದರು. ಜಿಲ್ಲೆಯ ಶ್ರೀಕೃಷ್ಣ ಮಠ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ, ಕಮಲಶಿಲೆ, ಮಾರಮಕಟ್ಟೆ ಸೇರಿದಂತೆ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಹಾಗೂ ಭಕ್ತರು ಆಗಮಿಸು ತ್ತಾರೆ. ಇದನ್ನು ಬಳಸಿಕೊಂಡು ಈ ಎಲ್ಲಾ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಪೂರಕವಾಗಿ ವ್ಯವಸ್ಥಿತ ಮೂಲಸೌಕರ್ಯ ಒದಗಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಜೆ.ಆರ್.ಲೋಬೊ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್, ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್‌ಕುಮಾರ್ ಕೊಡವೂರು, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ರಾಮ್‌ಪ್ರಸಾತ್ ಮನೋಹರ್, ಎಡಿಸಿ ಅಬೀದ್ ಗದ್ಯಾಳ, ಪ್ರವಾಸೋದ್ಯಮ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕಿ ವಿಂಧ್ಯಾ ಎನ್.ಎಮ್ ಮತ್ತಿತರರು ಉಪಸ್ಥಿತರಿದ್ದರು.










share
ವಾರ್ತಾಭಾರತಿ
ವಾರ್ತಾಭಾರತಿ
Next Story
X